ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ನೋಂದಣಿ: ಎಚ್ಚರಿಕೆ ಅಗತ್ಯ: ರಶ್ಮಿ ಮಹೇಶ ಸೂಚನೆ

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ ಸೂಚನೆ
Last Updated 25 ನವೆಂಬರ್ 2021, 3:41 IST
ಅಕ್ಷರ ಗಾತ್ರ

ಕೊಪ್ಪಳ:ಪ್ರತಿ ವರ್ಷದ ಕೊನೆಯ ಎರಡು ತಿಂಗಳು ಹಮ್ಮಿಕೊಳ್ಳುವ ವಿಶೇಷ ಮತದಾರರ ನೋಂದಣಿ ಅಭಿಯಾನವನ್ನು ವಿನೂತನ ಜಾಗೃತಿ ಕಾರ್ಯಕ್ರಮ ಆಯೋಜಿಸುವುದರ ಮೂಲಕ ಯಶಸ್ವಿಗೊಳಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿರಶ್ಮಿ.ವಿ.ಮಹೇಶ ಹೇಳಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ-2021ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶದಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದ್ದು, ಜಿಲ್ಲೆಯಲ್ಲಿಯೂ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಅದರ ಅಂಗವಾಗಿ ಪ್ರತಿ ವರ್ಷದ ಕೊನೆಯ ಎರಡು ತಿಂಗಳು ವಿಶೇಷ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗುತ್ತದೆ. ಈ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟ ಮತ್ತು 2022ರ ಜ.1ಕ್ಕೆ 18 ವರ್ಷ ಪೂರ್ಣಗೊಳ್ಳುವ ಮತದಾರರ ನೋಂದಣಿಗೆ ಅವಕಾಶವಿದ್ದು, ನೋಂದಣಿ ಕಾರ್ಯಕ್ಕೆ ನಿಯೋಜಿಸಿದ ಎಲ್ಲ ಬೂತ್ ಮಟ್ಟದ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯ 1,307 ಬೂತ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಪ್ರತಿದಿನದ ಫಾರಂ ವಿತರಣೆ ಮತ್ತು ಸ್ವೀಕೃತಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು.ಎಲ್ಲ ಬೂತ್‌ಗಳಲ್ಲಿ ಫಾರಂ ನಂ.6, 7, 8 ಮತ್ತು 8ಎ ಲಭ್ಯವಿರಬೇಕು. ಅರ್ಜಿದಾರರ ಬೇಡಿಕೆಯನುಸಾರ ನಮೂನೆಗಳನ್ನು ವಿತರಿಸಬೇಕು. ಹೊಸ ಅರ್ಜಿಗಳ ಸ್ವೀಕೃತಿ ಮತ್ತು ಆಕ್ಷೇಪಣೆಗಳ ಸ್ವೀಕೃತಿ ಬಗ್ಗೆ ಪ್ರತಿ ವಾರ ಮೇಲಧಿಕಾರಿಗಳು ಪರಿಶೀಲನೆ ನಡೆಸಬೇಕು. ಡಿ.27 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ ಎಂದರು.

ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಮತದಾರರ ಹೆಸರು ನೋಂದಣಿಗೆ, ಮೃತ ವ್ಯಕ್ತಿಯ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲು ಜಾಗೃತಿ ಮೂಡಿಸಬೇಕು. ತಮ್ಮ ಕ್ಷೇತ್ರದಲ್ಲಿನ ನೈಜ ಮತದಾರರ ಬಗ್ಗೆ ಮಾಹಿತಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯತಿ ಸಿಇಒ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯಲ್ಲಿ ವಿಶೇಷ ಮತದಾರರ ನೋಂದಣಿ ಅಭಿಯಾನದಲ್ಲಿ ಕೈಗೊಂಡ ಚಟುವಟಿಕೆ, ಜಾಗೃತಿ ಕಾರ್ಯಕ್ರಮ, ರಸಪ್ರಶ್ನೆ, ಮಾನವ ಸರಪಳಿ ನಿರ್ಮಾಣ, ‘ನಮ್ಮ ಮತ ನಮ್ಮ ಹಕ್ಕು’, ‘ಮತ ಮಾತು’ ಮುಂತಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್,ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಸಹಾಯಕ ಆಯುಕ್ತ ನಾರಾಯಣರಡ್ಡಿ ಕನಕರಡ್ಡಿ, ಯೋಜನಾ ನಿರ್ದೇಶಕ ಟಿ ಕೃಷ್ಣಮೂರ್ತಿ, ಮುಖ್ಯ ಯೋಜನಾಧಿಕಾರಿ ಮಂಜುನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT