ಗಂಗಾವತಿ: ಧಾರ್ಮಿಕ ದತ್ತಿ ಇಲಾಖೆ ಅಡಿ ಬರುವ ತಾಲ್ಲೂಕಿನ ದೇವಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿ ದರ್ಜೆ ಅರ್ಚಕರಿಗೆ ತಾಲ್ಲೂಕು ಆಡಳಿತದ ವತಿಯಿಂದ ಶನಿವಾರ ಆಹಾರ ಧಾನ್ಯದ ಕಿಟ್ ವಿತರಣೆ ಮಾಡಲಾಯಿತು.

ತಹಶೀಲ್ದಾರ್ ನಾಗರಾಜ ಮಾತನಾಡಿ,‘ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಹಾಗಾಗಿ ಧಾರ್ಮಿಕ ದತ್ತಿ ಇಲಾಖೆ ಅಡಿ ಬರುವ ದೇವಸ್ಥಾನಗಳನ್ನು ಕೂಡ ಬಂದ್ ಮಾಡಲಾಗಿದೆ. ಅಲ್ಲಿ ಕೆಲಸ ಮಾಡುವ ಅರ್ಚಕರು ಸಂಕಷ್ಟ ಎದುರಿಸುತ್ತಿದ್ದಾರೆ’ ಎಂದರು.

‘ಅವರಿಗೆ ನೆರವು ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದ್ದರಿಂದ ತಾಲ್ಲೂಕಿನ ಅಂಜನಾದ್ರಿ ಪರ್ವತ, ಪಂಪಾ ವಿರುಪಾಕ್ಷೇಶ್ವರ, ಪಂಪಾ ಸರೋವರ, ರಂಗನಾಥ ಸ್ವಾಮಿ ದೇವಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿ ದರ್ಜೆಯ 30 ಅರ್ಚಕರಿಗೆ ಆಹಾರ ಧಾನ್ಯದ ಕಿಟ್‍ಗಳನ್ನು ವಿತರಣೆ ಮಾಡಲಾಗಿದೆ’ ಎಂದು ಹೇಳಿದರು.

ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ, ಗ್ರಾಮ ಲೆಕ್ಕಾಧಿಕಾರಿ ಶರಣಪ್ಪ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.