ಕುಕನೂರು (ಕೊಪ್ಪಳ ಜಿಲ್ಲೆ): ‘ರಾಜ್ಯ ಸರ್ಕಾರದ 25 ಜನ ಸಚಿವರನ್ನು ತೆಗೆದು ಹೊಸಬರಿಗೆ ಅವಕಾಶ ಕೊಡಬೇಕು’ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಹೊಸಬರಿಗೆ ಅವಕಾಶ ಕೊಟ್ಟರೆ ಅವರಿಗೂ ಅನುಭವವಾಗುತ್ತದೆ. ಇರುವವರೇ ಕಾಯಂ ಆಗಿ ಇರಬೇಕು ಎಂದರೆ ಹೇಗೆ ಸಾಧ್ಯವಾಗುತ್ತದೆ. ಹೊಸಬರು ಅವಕಾಶ ಕೇಳುವುದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.

‘ನಾನು ಹೆಚ್ಚು ಬಾರಿ ಶಾಸಕನಾಗಿದ್ದರೂ ಮಂತ್ರಿ ಸ್ಥಾನ ಕೊಟ್ಟಿಲ್ಲ. ಆರ್ಥಿಕ ಸಲಹೆಗಾರ ಎನ್ನುವ ಹುದ್ದೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಉತ್ತಮ ಬಜೆಟ್ ಕೊಡಬಹುದೇ ವಿನಃ ಯಾವುದೇ ಅಧಿಕಾರ ಇರುವುದಿಲ್ಲ. ನನ್ನನ್ನು ಸಚಿವನನ್ನಾಗಿ ಮಾಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ’ ಎಂದರು.

‘ಮೇ 4ರ ಬಳಿಕ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ಪಕ್ಷದ ವರಿಷ್ಠರು ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆ ಮಾಡುತ್ತಾರೆ. ಅಗತ್ಯವಿದ್ದರೆ ಬದಲಾವಣೆ ಮಾಡುತ್ತಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.