ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತದಿಂದ ಅಹವಾಲು ಸ್ವೀಕಾರ 21ರಿಂದ

Last Updated 20 ನವೆಂಬರ್ 2022, 7:20 IST
ಅಕ್ಷರ ಗಾತ್ರ

ಕೊಪ್ಪಳ: ಕರ್ನಾಟಕ ಲೋಕಾಯುಕ್ತ ಕೊಪ್ಪಳ ಕಚೇರಿಯಿಂದ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿ ನ. 21 ಹಾಗೂ 22ರಂದು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆ ನಡೆಸಲಿದ್ದಾರೆ.

21ರಂದು ಬೆಳಿಗ್ಗೆ 10.30ಕ್ಕೆ ಗಂಗಾವತಿಯ ಹೊಸ ಪ್ರವಾಸಿ ಮಂದಿರದಲ್ಲಿ ಹಾಗೂ ಯಲಬುರ್ಗಾದ ಹೊಸ ಸರ್ಕ್ಯೂಟ್ ಹೌಸ್‌ನಲ್ಲಿ, ಮಧ್ಯಾಹ್ನ 2.30ಕ್ಕೆ ಕಾರಟಗಿಯ ಪ್ರವಾಸಿ ಮಂದಿರದಲ್ಲಿ ಹಾಗೂ ಕುಕನೂರಿನ ಹೊಸ ಸರ್ಕ್ಯೂಟ್ ಹೌಸ್‌ನಲ್ಲಿ, 22ರಂದು ಬೆಳಿಗ್ಗೆ 10.30ಕ್ಕೆ ಕುಷ್ಟಗಿಯ ಹಳೆ ಪ್ರವಾಸಿ ಮಂದಿರ, ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಮತ್ತು ಮಧ್ಯಾಹ್ನ 2.30ಕ್ಕೆ ಕನಕಗಿರಿಯ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕಾರ ನಡೆಯಲಿದೆ.

ಸಾರ್ವಜನಿಕರು ಸಂಬಂಧಿಸಿದ ತಾಲ್ಲೂಕುಗಳ ಅಹವಾಲು ಸ್ವೀಕಾರ ಸಭೆಗೆ ಆಗಮಿಸಿ ಕುಂದು ಕೊರತೆ ದೂರುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 08539-295200 ಅಥವಾ 220533 ಸಂಪರ್ಕಿಸಿ.

ಉದ್ಯೋಗದ ನೆರವಿಗೆ ‘ಸ್ಕಿಲ್ ಕನೆಕ್ಟ್’ ಆರಂಭ

ಕೊಪ್ಪಳ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗದ ನೆರವಿಗಾಗಿ ಸ್ಕಿಲ್ ಕನೆಕ್ಟ್ ಎಂಬ ಅಧಿಕೃತ ವೆಬ್ ಪೋರ್ಟಲ್‌ ತಯಾರಿಸಲಾಗಿದೆ.

ವಿದ್ಯಾರ್ಹತೆ ಅನುಸಾರವಾಗಿ ವಿವಿಧ ರೀತಿಯ ಕೌಶಲ ಅನುಭವ ಹೊಂದಿರುವ ಅಭ್ಯರ್ಥಿಗಳು skillconnect.kaushalkar.com ನಲ್ಲಿ ನೋಂದಾಯಿಸಿಕೊಳ್ಳಬೇಕು. ಇದರಲ್ಲಿ ನೋಂದಾಯಿಸಿದ ಅಭ್ಯರ್ಥಿಗಳಿಗೆ ಉದ್ಯೋಗದ ಅವಕಾಶದ ಕುರಿತು ಕಂಪನಿಯವರು ನೇರವಾಗಿ ಅಭ್ಯರ್ಥಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸುತ್ತಾರೆ. ಇನ್ನಷ್ಟು ಮಾಹಿತಿಗೆ ಜಿಲ್ಲಾ ಕೌಶಲಾಭಿವೃದ್ಧಿ ಕಚೇರಿಯ ಜಿಲ್ಲಾ ಸಂಯೋಜಕ ಶರಣಪ್ಪ ತೊಂಡಿಹಾಳ 9743839859 ಅವರನ್ನು ಸಂಪರ್ಕಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT