ಸೋಮವಾರ, ಜುಲೈ 4, 2022
25 °C

ಮಾಜಿ ಸಚಿವ ಬಸವರಾಜ ರಾಯರಡ್ಡಿ ಬರೆದ ಪುಸ್ತಕ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಕೃಷ್ಣಾ ಬಿ ಸ್ಕೀಂ ಯೋಜನೆ ಕುರಿತು ಶುಕ್ರವಾರ ಯಲಬುರ್ಗಾದಲ್ಲಿ ಮಾಜಿ ಸಚಿವ ಬಸವರಾಜ ರಾಯರಡ್ಡಿ ಅವರು ಬರೆದ ನೀರಾವರಿ ಯೋಜನೆಯ ವಸ್ತು ಸ್ಥಿತಿ ಹಾಗೂ ಸತ್ಯಾಂಶ ಪುಸ್ತಕ ಬಿಡುಗಡೆ ಮಾತನಾಡಿದರು. ಯೋಜನೆಯ ಪ್ರಗತಿ ಕುರಿತು ತಿಳಿಸಿದರು. 

ಈ ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್ ಪಕ್ಷ ಅಪಾರವಾಗಿ ಶ್ರಮಿಸಿದೆ. ಕೇಂದ್ರ ಸರ್ಕಾರ 2013ರಿಂದಲೂ ಯಾವುದೇ ಕೆಲಸ ಮಾಡಿಲ್ಲ. ರೈತರ ಹಿತದೃಷ್ಟಿಯಿಂದ ಯೋಜನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ಯೋಜನೆ ಅನುಷ್ಠಾನಕ್ಕೆ ಆಸಕ್ತಿ ತೋರಿಸಬೇಕು. ಕೇಂದ್ರದಲ್ಲಿ ಅವರದೇ ಸರ್ಕಾರ ಇರುವುದರಿಂದ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಪ್ರಧಾನಿ ಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಬ್ಲಾಕ್ ಕಮಿಟಿ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಹನಮಂತಗೌಡ ಪಾಟೀಲ ಚೆಂಡೂರ, ವೆಂಕನಗೌಡ ಯರಾಶಿ ಮುಂತಾದವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.