ಅಳವಂಡಿ: ‘ಒಂದು ಗ್ರಾಮ ಹಾಗೂ ಸಮುದಾಯ ಅಭಿವೃದ್ಧಿ ಹೊಂದಲು ಧಾರ್ಮಿಕ ಕಾರ್ಯಕ್ರಮಗಳು ಅವಶ್ಯವಾಗಿದೆ. ಪ್ರತಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಒಳ್ಳೆಯ ಕೆಲಸಗಳನ್ನು ಮಾಡಬೇಕು’ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಸಮೀಪದ ತಿಗರಿ ಗ್ರಾಮದಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಸಾಮೂಹಿಕ ವಿವಾಹ ಅಂಗವಾಗಿ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಮಾದರಿಯಾಗಿದ್ದಾರೆ. ಅಂಥ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದರು.

‘ಪ್ರತಿವರ್ಷ ಗದಗ ಹಾಗೂ ಬಳ್ಳಾರಿಯಲ್ಲಿ ಸುಮಾರು 45,000 ಸಾವಿರ ಸಾಮೂಹಿಕ ವಿವಾಹ ಮಾಡಿಸಿದ್ದೇನೆ. ಹಿಂದಿನ ಸರ್ಕಾರಗಳು ಸಾಮೂಹಿಕ ವಿವಾಹ ಮಾಡಬೇಕು ಎಂಬುದು ಯೋಚನೆ ಕೂಡ ಮಾಡಿರಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಪ್ತಪದಿ ಸಾಮೂಹಿಕ ವಿವಾಹ ಯೋಜನೆ ಜಾರಿಗೆ ತಂದಿದೆ. ಸತತ ಪರಿಶ್ರಮದಿಂದ ಹೋರಾಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಲಾಗಿದ್ದು, ಯುವಕರು ಹಾಗೂ ವಿದ್ಯಾರ್ಥಿಗಳು ಶಿಕ್ಷಣ, ಉದ್ಯೋಗ ಪಡೆಯಲು ಮೀಸಲಾತಿಯ ಅನುಕೂಲ ಪಡೆದುಕೊಳ್ಳಬೇಕು’ ಎಂದರು.

ಶಿರಹಟ್ಟಿಯ ಫಕೀರೇಶ್ವರ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ‘ದೇಶದಲ್ಲಿ ಆಗಿಹೋಗಿ ಹೋದ ವಿಷಯ ಅಥವಾ ಇತಿಹಾಸ ಬರೆಯುವರನ್ನು ಇತಿಹಾಸ ತಜ್ಞರು ಎನ್ನುತ್ತಾರೆ. ಆದರೆ ಮುಂದೆ ನಡೆಯುವ ಇತಿಹಾಸ ಬರೆದವರು ಮಹರ್ಷಿ ವಾಲ್ಮೀಕಿ ಮಾತ್ರ. ಸಮಾಜ ಒಗ್ಗಟ್ಟಿನಿಂದ ಇದ್ದರೆ ಎಲ್ಲವುದನ್ನು ಸಾಧಿಸಲು ಸಾಧ್ಯ. ಸಾಮೂಹಿಕ ವಿವಾಹ ಹಮ್ಮಿಕೊಳ್ಳುವ ಮೂಲಕ ಸಂಘಟಕರು ಬಡವರಿಗೆ ಉತ್ತಮ ಕೆಲಸ ಮಾಡಿದ್ದಾರೆ’ ಎಂದರು.

ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕವ್ವ ಹರಿಜನ, ಮೈನಳ್ಳಿ- ಬಿಕನಹಳ್ಳಿಯ ಸಿದ್ದೇಶ್ವರ ಶಿವಾಚಾರ್ಯರು, ಹುಲಿಹೈದರನ ವಾಲ್ಮೀಕಿ ಪುರಾತನ ಗುರುಮನೆತನದ ರಾಜಾ ಅಚ್ಯುತ ನಾಯಕ, ಬಹದ್ದೂರ್ ಬಂಡಿಯ ಬಂಜಾರ ಧರ್ಮಗುರು ಗುರುಗೋಸಾಯಿ ಹೇಮಗಿರಿ ಭಾವ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ, ಬಿಜೆಪಿ ಮುಖಂಡ ಸಿ.ವಿ.ಚಂದ್ರಶೇಖರ, ವಾಲ್ಮೀಕಿ ಸಂಘದ ಕಾರ್ಯದರ್ಶಿ ಸುರೇಶ್ ಡೊಣ್ಣಿ, ಜಿ.ಪಂ ಮಾಜಿ ಸದಸ್ಯ ಭರಮಪ್ಪ ನಗರ, ಈಶಪ್ಪ ಮಾದಿನೂರ, ತಾಲ್ಲೂಕು ಮಹರ್ಷಿ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಮುಖಂಡ ಭೀಮನಗೌಡ ಪೊಲೀಸ್ ಪಾಟೀಲ್, ವಾಲ್ಮೀಕಿ ಮಹಾಸಭಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸುರೇಶ ಡೊಣ್ಣಿ, ಸಾಧಿಕ ಹುಸೇನ್ ಅತ್ತಾರ, ಮಂಜುನಾಥ ಶ್ಯಾವಿ, ವೀರೇಶ ಸಜ್ಜನ, ಗವಿಸಿದ್ದಪ್ಪ ಮುತ್ತಾಳ, ಮಾರುತಿ ಕಾತರಕಿ, ಮುದಿಯಪ್ಪ ಅಡವಳ್ಳಿ ಪಾಲ್ಗೊಂಡಿದ್ದರು. ತಾಲ್ಲೂಕು ಘಟಕದ ಅಧ್ಯಕ್ಷ ಶರಣಪ್ಪ ಎಚ್. ನಾಯಕ, ತಿಗರಿ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ ಪೂಜಾರ, ಮುದಿಯಪ್ಪ ಅಡವಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.