ಭಾನುವಾರ, ಮೇ 29, 2022
20 °C
ತಾಲ್ಲೂಕು ಆಡಳಿತದಿಂದ ಗಣರಾಜ್ಯೋತ್ಸವ ಆಚರಣೆ

‘ಸಂವಿಧಾನ ದೇಶದ ಪವಿತ್ರ ಗ್ರಂಥ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ‘ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದು, ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯದಲ್ಲಿ ಯಾವುದೇ ತಾರತಮ್ಯ ಭಾವನೆ ಇಲ್ಲ. ಹೀಗಾಗಿ ಸಂವಿಧಾನ ಜಗತ್ತಿನಲ್ಲಿ ಶ್ರೇಷ್ಠವಾಗಿದೆ’ ಎಂದು ತಹಶೀಲ್ದಾರ್ ಧನಂಜಯ ಮಾಲಗಿತ್ತಿ ತಿಳಿಸಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ತಾಲ್ಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಬುಧವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂವಿಧಾನ ದೇಶದ ಪವಿತ್ರ ಗ್ರಂಥ. ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ, ಸೌಲಭ್ಯಗಳನ್ನು ಸಂವಿಧಾನದ ಮೂಲಕ ಕಲ್ಪಿಸಿದ್ದಾರೆ. ಹಕ್ಕುಗಳನ್ನು ಪಡೆಯುವ ಮೂಲಕ ಕರ್ತವ್ಯಗಳನ್ನು ಸಹ ನಿಭಾಯಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯ ಮತ್ತು ಸಮಾನತೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆ ಅಪಾರ ಎಂದು ಹೇಳಿದರು.

ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರ ಪ್ರಾಂಶುಪಾಲ ಎ.ಮಾರೆಪ್ಪ ಮಾತನಾಡಿದರು.

ಪೊಲೀಸ್ ಇನ್‌ಸ್ಪೆಕ್ಟರ್ ಪರಸಪ್ಪ ಭಜಂತ್ರಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೆಯ ಹೆಗಡೆ, ಪಿಎಸ್ಐ ಕಾಶೀಂಸಾಬ, ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ, ಶಿಕ್ಷಣ ಸಂಯೋಜಕ ಆನಂದ ನಾಗಮ್ಮನವರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಶಂಶಾದಬೇಗ್ಂ, ಖಜಾನಾಧಿಕಾರಿ ಗಂಗಾಧರ, ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಶಂಕ್ರಪ್ಪ ಸೋಮನಕಟ್ಟಿ ಇದ್ದರು.

ಶಿಕ್ಷಕರಾದ ಪ್ರಭುಲಿಂಗ ವಸ್ತ್ರದ, ಶಾಮೀದಸಾಬ ಲೈನದಾರ ನಿರೂಪಿಸಿದರು. ಪೊಲೀಸ್ ಇಲಾಖೆಯಿಂದ ವಂದನೆ ಸಲ್ಲಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು