ಶುಕ್ರವಾರ, ಮೇ 27, 2022
23 °C

ವಿವಿಧೆಡೆ ಸಂಭ್ರಮದ ಧ್ವಜಾರೋಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ಪಟ್ಟಣ ಸೇರಿದಂತೆ ವಿವಿಧ ಗ್ರಾಮದ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಹಾಗೂ ಸಂಘ-ಸಂಸ್ಥೆಗಳ ಕಚೇರಿಯಲ್ಲಿ ಬುಧವಾರ 73ನೇ ಧ್ವಜಾರೋಹಣ ಕಾರ್ಯಕ್ರಮವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರಭಾರ ಪ್ರಾಂಶುಪಾಲ ಮಾರೆಪ್ಪ ಹಾಗೂ ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ ಧ್ವಜಾರೋಹಣ ನೆರವೇರಿಸಿದರು.

ಎನ್‌ಎಸ್‌ಎಸ್‌ ಅಧಿಕಾರಿ ದಾದಪೀರ, ಸಾಹಿತಿ ಇಮಾಮಸಾಹೇಬ್ ಹಡಗಲಿ, ಶಿಕ್ಷಕರು ಹಾಗೂ ಉಪನ್ಯಾಸಕರು ಇದ್ದರು.

ಇಲ್ಲಿನ ನಿವೃತ್ತ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಮಹಾಂತೇಶ ತಾಡಪತ್ರಿ ಅವರು ಧ್ವಜಾರೋಹಣ ನೆರವೇರಿಸಿದರು.

ಪ್ರಮುಖರಾದ ಗುರುಸಿದ್ದಪ್ಪ ಹಾದಿಮನಿ, ಪ್ರಹ್ಲಾದರಾವ್ ಹಾಗೂ ಲಕ್ಷ್ಮಣ ಪತ್ತಾರ ಮಾತನಾಡಿದರು.

ಸಂಘದ ಪದಾಧಿಕಾರಿಗಳಾದ ಮೋದಿನಸಾಬ, ಮಲ್ಲಿಕಾರ್ಜುನಗೌಡ, ಬಸವರಾಜ ಹಡಪದ ಹಾಗೂ ಇತರರು ಇದ್ದರು.

ಮಾಜಿ ಶಾಸಕ ಶಿವರಾಜ ತಂಗಡಗಿ ಅವರ ನಿವಾಸದಲ್ಲಿರುವ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಗಣರಾಜ್ಯೋತ್ಸವ, ಅಂಬಿಗರ ಚೌಡಯ್ಯ, ವೇಮನ ಹಾಗೂ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನವನ್ನು ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲ್ಲುಬಾಗಿಲಮಠ ಅವರು ಧ್ವಜಾರೋಹಣ ನೆರವೇರಿಸಿದರು.

ಪಕ್ಷದ ವಕ್ತಾರ ಶರಣಬಸಪ್ಪ ಭತ್ತದ, ತಾ.ಪಂ. ಮಾಜಿ ಅಧ್ಯಕ್ಷ ಹೊನ್ನುರುಸಾಬ ಮಾತನಾಡಿದರು.

ತಂಗಡಗಿ ಟ್ರಸ್ಟ್ ಕೋಶಾಧ್ಯಕ್ಷ ನಾಗರಾಜ ತಂಗಡಗಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಸಂಗಪ್ಪ ಸಜ್ಜನ್, ಅನಿಲಕುಮಾರ ಬಿಜ್ಜಳ, ರಾಜಾಸಾಬ ನಂದಾಪುರ, ಶರಣೆಗೌಡ ಪಾಟೀಲ, ಕಂಠಿರಂಗ ನಾಯಕ, ಮಾಜಿ ಉಪಾಧ್ಯಕ್ಷ ಹುಲಗಪ್ಪ ವಾಲೇಕಾರ, ಪದಾಧಿಕಾರಿಗಳಾದ ನಾಗಪ್ಪ ಹುಗ್ಗಿ, ಗೋವರ್ದನಮ್ಮ, ರವಿಶಂಕರ ಪಾಟೀಲ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು ಇದ್ದರು.

ಸಮೀಪದ ನವಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅಧ್ಯಕ್ಷೆ ನೇತ್ರಾವತಿ ನಿಂಗಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮರೇಶ ರಾಠೋಡ್ ಮಾತನಾಡಿದರು.

ಗ್ರಾ.ಪಂ. ಸದಸ್ಯರಾದ ನಾಗೇಶ ಪರಂಗಿ, ಭೋಗಪ್ಪ, ದುರಗಪ್ಪ, ಮಾಜಿ ಅಧ್ಯಕ್ಷ ಮರಿರಾಜ ಭಜಂತ್ರಿ, ಮಾಜಿ ಸದಸ್ಯರಾದ ಮಲ್ಲಿಕಾರ್ಜುನ ಬಳಗಾನೂರು, ಸಿದ್ರಾಮಗೌಡ ಉಪ್ಪಳ ಸೇರಿದಂತೆ ಮುಖಂಡರು ಭಾಗವಹಿಸಿದ್ದರು.

ಸಮೀಪದ ಹುಲಿಹೈದರ ಗ್ರಾಮದ ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಹನುಮಂತ ಗೋಡಿ ಧ್ವಜಾರೋಹಣ ನೆರವೇರಿಸಿದರು. ಜಿ.ಪಂ. ಮಾಜಿ ಸದಸ್ಯ ಹನುಮೇಶ ನಾಯಕ, ತಾ.ಪಂ. ಮಾಜಿ ಉಪಾಧ್ಯಕ್ಷ ಕನಕಪ್ಪ ತಳವಾರ, ಅಮರಪ್ಪ ಗದ್ದಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ಪಕ್ಷದ ಮುಖಂಡರು ಇದ್ದರು.

ಇಲ್ಲಿನ ಆದರ್ಶ ವಿದ್ಯಾಲಯದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಕನಕರೆಡ್ಡಿ ಕೆರಿ ಧ್ವಜಾರೋಹಣ ನೆರವೇರಿಸಿದರು.

ಮುಖ್ಯಶಿಕ್ಷಕ ಶಿವಕುಮಾರ ಮಾತನಾಡಿದರು.

ಎಸ್‌ಡಿಎಂಸಿ ಉಪಾಧ್ಯಕ್ಷೆ ಸಾಹೇರಬಾನು, ಸದಸ್ಯರಾದ ಹನುಮೇಶ ಹಡಪದ, ಮುಖಂಡ ರಾಮಣ್ಣ, ಶಿಕ್ಷಕರಾದ ರೇಣುಕಾ ನಾಯಕವಾಡಿ, ಕೆ.ಎಲ್.ಮಂಜು, ವಿನೋದ ಜಾಧವ, ಶಾರದ, ಶ್ರೀವಾಣಿ ಮಾದಿನಾಳ ಹಾಗೂ ಶಿಕ್ಷಕರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು