ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ಜಲಾಶಯ: ಪ್ರವಾಸಿಗರಿಗೆ ನಿರ್ಬಂಧ

ಮುನಿರಾಬಾದ್: ತುಂಗಭದ್ರಾ ಜಲಾಶಯ
Last Updated 5 ಆಗಸ್ಟ್ 2021, 2:52 IST
ಅಕ್ಷರ ಗಾತ್ರ

ಮುನಿರಾಬಾದ್: ಇಲ್ಲಿನ ತುಂಗಭದ್ರಾ ಜಲಾಶಯ ಪ್ರವೇಶಕ್ಕೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ವಾರಾಂತ್ಯದಲ್ಲಿ ಇಲ್ಲಿಗೆ ಹೆಚ್ಚಿನ ಸಂಖ್ಯೆಯ ವೀಕ್ಷಕರು ಬರುತ್ತಿದ್ದರು. ಹಾಗೆ ಬಂದ ಪ್ರವಾಸಿಗರು ದಡಕ್ಕೆ ಅಪ್ಪಳಿಸುವ ತೆರೆಗಳಿಗೆ ಮೈಯೊಡ್ಡಿ ನಿಲ್ಲುವುದು, ನೀರಲ್ಲಿ ನಿಂತುಕೊಂಡು ಅಸುರಕ್ಷಿತವಾಗಿ ಸೆಲ್ಫಿ, ಫೋಟೊ ಮತ್ತು ವಿಡಿಯೊ ತೆಗೆದುಕೊಳ್ಳುತ್ತಿದ್ದರಿಂದ ಪೊಲೀಸರಿಗೆ ಮತ್ತು ಜಲಾಶಯದ ರಕ್ಷಣಾ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿತ್ತು.

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಗುಂಪುಗೂಡುತ್ತಿದ್ದರಿಂದ ಪ್ರವಾಸಿಗರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಗಿತ್ತು. ಜಲಾಶಯದ ಹಿನ್ನೀರು ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರು ಮತ್ತು ಅಲ್ಲಿನ ರಕ್ಷಣಾ ಸಿಬ್ಬಂದಿ ನಡುವೆ ವಾಗ್ವಾದವೂ ನಡೆದಿತ್ತು. ಇದನ್ನು ಗಮನಿಸಿದ ಜಿಲ್ಲಾಡಳಿತ ಆ. 2 ರಿಂದ ಆ.17 ರ ಮಧ್ಯರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದೆ.

ತುಂಗಭದ್ರಾ ಜಲಾಶಯ ಹಾಗೂ ಪ್ರೇಕ್ಷಣಿಯ ಸ್ಥಳಗಳ 2 ಕಿ.ಮೀ. ವ್ಯಾಪ್ತಿಯಲ್ಲಿ, ಕೊಪ್ಪಳ ಗ್ರಾಮೀಣ ಠಾಣೆ ಮತ್ತು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹಿನ್ನೀರು ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT