ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1 ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ನೀಡಿದರೆ 1 ಕೆ.ಜಿ. ಅಕ್ಕಿ

Last Updated 3 ಅಕ್ಟೋಬರ್ 2021, 6:10 IST
ಅಕ್ಷರ ಗಾತ್ರ

ಕೊಪ್ಪಳ: ಸ್ವಚ್ಛ್ ಭಾರತ್ ಮಿಷನ್ (ಗ್ರಾ), ಕ್ಲೀನ್ ಇಂಡಿಯಾ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾದ ‘1 ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ ನೀಡಿ 1 ಕೆ.ಜಿ ಅಕ್ಕಿ ಪಡೆಯಿರಿ’ ಕಾರ್ಯಕ್ರಮದ ಪೋಸ್ಟರ್‌ಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.

ನಂತರ ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಸ್ವಚ್ಛ್ ಭಾರತ್ ಮಿಷನ್(ಗ್ರಾ), ಕ್ಲೀನ್ ಇಂಡಿಯಾ ಅಡಿಯಲ್ಲಿ ಅ.2 ರಿಂದ 30 ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದರು.

ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಹೇಮಂತ್ ಕುಮಾರ್,ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಜಿ.ಪಂ. ಉಪಕಾರ್ಯದರ್ಶಿ ಶರಣಬಸವರಾಜ, ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ನೆಹರು ಯುವ ಕೇಂದ್ರದ ಮೋಂಟು ಪತ್ತಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT