ಕೊಪ್ಪಳ: ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಕೊಪ್ಪಳ, ನರೇಗಲ್, ಯತ್ನಟ್ಟಿ, ಚಿಲವಾಡಗಿ ಹಾಗೂ ಕಲಿಕೇರಿ ಗ್ರಾಮಗಳಲ್ಲಿ ₹9.50 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಅಡಿಗಲ್ಲು ನೆರವೇರಿಸಿದರು.

ನರೇಗಲ್ ಗ್ರಾಮದಲ್ಲಿ ₹2 ಕೋಟಿ ವೆಚ್ಚದಲ್ಲಿ ನರೇಗಲ್ -ಮಾದಿನೂರು ಕ್ರಾಸ್ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿ ‘ಕ್ಷೇತ್ರದಲ್ಲಿ ಹದಗೆಟ್ಟಿರುವ ಎಲ್ಲಾ ರಸ್ತೆಗಳಿಗೂ ಅನುದಾನ ತರುವ ಕೆಲಸ ಮಾಡುತ್ತಿದ್ದೇವೆ. ಹಂತಹಂತವಾಗಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತೇವೆ. ದದೇಗಲ್ನಿಂದ ನರೇಗಲ್ ತನಕ ಉತ್ತಮ ರಸ್ತೆ ನಿರ್ಮಿಸಲಾಗುವುದು’ ಎಂದು ತಿಳಿಸಿದರು.

‘ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿದ್ದೇವೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಡಿಯಲ್ಲಿ ಹದಗೆಟ್ಟಿರುವ ರಸ್ತೆಗಳಿಗೆ ಅನುದಾನ ನೀಡಲಾಗಿದೆ’ ಎಂದರು.

ನಗರದ ಶಿವಪ್ರಿಯ ಲೇ ಔಟ್ನಲ್ಲಿ ₹5 ಕೋಟಿ ವೆಚ್ಚದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಸತಿ ನಿಲಯದ ಕಟ್ಟಡಕ್ಕೆ ಶಾಸಕರು ಭೂಮಿಪೂಜೆ ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪ್ರಸನ್ನ ಗಡಾದ, ಓಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಡಚಪ್ಪ ಭೋವಿ, ಮುಖಂಡರಾದ ಯಮನೂರಪ್ಪ ನಾಯಕ, ಮುಕ್ಕಣ್ಣ ಚಿಲವಾಡಗಿ, ಯಲ್ಲಪ್ಪ ಹಳೇಮನಿ, ರಮೇಶ ಓಜನಹಳ್ಳಿ, ಅನಿಲ್ ಬರೋಟಿ, ಧರ್ಮರಾವ್ ಕಂಪಸಾಗರ, ತಹಶೀಲ್ದಾರ್ ವಿಠ್ಠಲ ಚೌಗುಲಾ, ಚಂದಪ್ಪ ನರೇಗಲ್, ವೀರನಗೌಡ ನರೇಗಲ್, ಬಸವರಾಜ್ ಮೇಟಿ, ಹನಮಂತ ಮೇಟಿ, ಮಾರುತಿ ಕಲಿಕೇರಿ, ಮಂಜುನಾಥ್ ಓಜನಹಳ್ಳಿ, ಉಮೇಶ ಮೇಟಿ, ಪ್ರಭು ಕಲಾಲ್, ಅಕ್ಬರ್ ಪಲ್ಟಾನ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.