ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾಂಬರೀಕರಣ ಕಾಮಗಾರಿಗೆ ಚಾಲನೆ

Last Updated 4 ಜೂನ್ 2021, 13:15 IST
ಅಕ್ಷರ ಗಾತ್ರ

ಹನುಮಸಾಗರ: ಅಡವಿಭಾವಿ ಹಾಗೂ ತೋಪಲಕಟ್ಟಿ ಗ್ರಾಮಸ್ಥರ ಬಹುದಿನದ ಬೇಡಿಕೆಯಾಗಿದ್ದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಈ ಎರಡು ಗ್ರಾಮಗಳು ಸೇರಿದಂತೆ ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರಿಗೆ ಅನುಕೂಲವಾಗಲಿದೆ ಎಂದು ಶಾಸಕ ಅಮರೇಗೌಡ ಬಯ್ಯಾಪೂರ ಹೇಳಿದರು.

ಶುಕ್ರವಾರ ಸಮೀಪದ ಅಡವಿಭಾವಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟ ಪ್ರದೇಶ ಅಭಿವೃದ್ಧಿ ಯೋಜನೆ ಅಡಿ ₹1.2 ಕೋಟಿ ವೆಚ್ಚದಲ್ಲಿ ಅಡವಿಭಾವಿ ಹಾಗೂ ತೋಪಲಕಟ್ಟಿ ಗ್ರಾಮದ 4.60 ಕಿ.ಮೀ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು. ಕಾಲಮಿತಿಯೊಳಗೆ ಮುಗಿಸಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹನುಮವ್ವ ಮಲ್ಲಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಪುತ್ರಪ್ಪ ಬರಿದೆಲೆ, ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಧರಣೇಂದ್ರ, ಪ್ರಮುಖರಾದ ಸೋಮಶೇಖರ ವೈಜಾಪೂರ, ಸುಭಾಷ್ ಹುಲಸಗೇರಿ, ಪ್ರಭುರಾಜ ಜಾಲಿಹಾಳ, ರಾಜು ಓಲೇಕಾರ, ಪರಮೇಶ ಕಾಪ್ಸೆ, ಮಲ್ಲಪ್ಪ, ಸುರೇಶ ಗೌಡ್ರ ಹಾಗೂ ಮುತ್ತಪ್ಪ ಬಳೂಟಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT