ಸೋಮವಾರ, ಆಗಸ್ಟ್ 8, 2022
23 °C

ಕೊಪ್ಪಳ: ದೇವಸ್ಥಾನದ ಹುಂಡಿ ಕಳ್ಳತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ತಾಲೂಕಿನ ಹ್ಯಾಟಿ ಗ್ರಾಮದಲ್ಲಿರುವ ಹೊನ್ನಲಾಂಬಿಕಾ ದೇವಸ್ಥಾನದ ಹುಂಡಿಯನ್ನು ಗುರುವಾರ ರಾತ್ರಿ ಕಳವು ಮಾಡಲಾಗಿದೆ. ಹುಂಡಿ ಒಡೆದು ಅದರಲ್ಲಿನ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ.

ಬೆಳಿಗ್ಗೆ ಗ್ರಾಮಸ್ಥರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಹುಂಡಿಯಲ್ಲಿ ಹತ್ತಾರು ಸಾವಿರ ರೂಪಾಯಿ ಸಂಗ್ರಹವಾಗಿತ್ತು ಎಂದು ಹೇಳಲಾಗುತ್ತಿದೆ.

ಒಂದು ವರ್ಷದ ಹಿಂದೆ ಇದೇ ದೇವಸ್ಥಾನದಲ್ಲಿ ಬೆಳ್ಳಿ ಮೂರ್ತಿ ಕಳುವಾಗಿತ್ತು. ಈಗ ಹುಂಡಿ ಕಳ್ಳತನ ಮಾಡಿ, ನಗ ನಾಣ್ಯ ದೋಚಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಘಟನೆಯಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕಳ್ಳರನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು