ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ: ಜನಾದರ್ನರೆಡ್ಡಿ

Last Updated 19 ಮಾರ್ಚ್ 2023, 7:40 IST
ಅಕ್ಷರ ಗಾತ್ರ

ಗಂಗಾವತಿ: ಗಾಲಿ ಜನಾದರ್ನರೆಡ್ಡಿ ನಡಿಗೆ, ಗ್ರಾಮೀಣಭಿವೃದ್ಧಿ ಕಡೆಗೆ ಎಂಬ ಅಭಿಯಾನದಡಿ ಕೆಆರ್‌ಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾದರ್ನರೆಡ್ಡಿ ಗಂಗಾವತಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸುವ ಭರವಸೆ ನೀಡಿದರು.

ಚಿಕ್ಕಬೊಮ್ಮನಾಳ್ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ದೇವಸ್ಥಾನಕ್ಕೆ ತೆರಳಿ ದರ್ಶನ‌ ಪಡೆದ ನಂತರ ಮಾತನಾಡಿದ ಅಬರು, ‘ಕ್ಷೇತ್ರ ಅಭಿವೃದ್ಧಿ ಮಾಡುವ ಹಿತದೃಷ್ಟಿಯಿಂದ ಪ್ರತಿ ಗ್ರಾಮಕ್ಕೂ ಭೇಟಿ ನೀಡುತ್ತಿದ್ದೇನೆ. ಸಮಸ್ಯೆ, ಬೇಡಿಕೆಗಳನ್ನು ತಿಳಿದು ಅವುಗಳನ್ನು ಮುಂದಿನ ದಿನಗಳಲ್ಲಿ ಈಡೇರಿಸಲಾಗುತ್ತದೆ. ಒಟ್ಟಾರೆಯಾಗಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಪಕ್ಷ ಬದ್ಧವಿದೆ’ ಎಂದರು.

ಕೆಆರ್‌ಪಿಪಿ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ, ವಿಧ್ಯಾರ್ಥಿನಿಯರಿಗೆ, ದುಡಿಯುವ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ, ರೈತರಿಗೆ ವಾರ್ಷಿಕ ₹15 ಸಾವಿರ ಸಹಾಯಧನ, ಕೃಷಿಗಾಗಿ 9 ಗಂಟೆ ವಿದ್ಯುತ್, ನಿರುದ್ಯೋಗಿಗಳಿಗೆ ₹ 2500 ಗೌರವಧನ ನೀಡಲಾಗುವುದು ಎಂದು ಭರವಸೆ ನೀಡಿದರು.

ಗಂಗಾವತಿ ವಿಧಾನಸಭಾ ಕ್ಷೇತ್ರದ ವೆಂಕಟಾಪುರ, ಹೊಸೂರು, ವಡ್ಡರಹಟ್ಟಿ, ಹನುಮನಹಟ್ಟಿ, ಯಲಂಗೇರ, ಯಲಮಗೇರಿ‌ ತಾಂಡ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಪಕ್ಷದ ಜಿಲ್ಲಾಧ್ಯಕ್ಷರು, ತಾಲ್ಲೂಕು, ನಗರ ಮತ್ತು ಗ್ರಾಮೀಣ ಘಟಕದ ಅಧ್ಯಕ್ಷರು ಸೇರಿ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT