ಯಲಬುರ್ಗಾ: ತಾಲ್ಲೂಕಿನ ತುಮ್ಮರಗುದ್ದಿ ಗ್ರಾಮದ ಪ್ಯಾಟಿ ಬಸವೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ, ವರದಿ ಸಲ್ಲಿಸಿದ್ದರೂ ಮತ್ತೊಮ್ಮೆ ತನಿಖಾ ತಂಡ ರಚಿಸಿ ಅನಗತ್ಯ ವಿಳಂಬ ಹಾಗೂ ಪ್ರಕರಣ ಮುಚ್ಚಿಹಾಕುವ ಹುನ್ನಾರ ನಡೆದಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಫೆಬ್ರುವರಿಯಲ್ಲಿ ಮೂವರು ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡ ಸಮಗ್ರ ಮಾಹಿತಿ ಸಂಗ್ರಹಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಿದ್ದರೂ ಆ ವರದಿ ಪ್ರಕಾರ ಕ್ರಮಕ್ಕೆ ಮುಂದಾಗದೇ ನಿರ್ಲಕ್ಷ್ಯ ವಹಿಸಿದ್ದಾರೆ. ಕಾಣದ ಕೈಗಳು ಈ ಪ್ರಕರಣದ ಪರಿಸಮಾಪ್ತಿಗೆ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಮತ್ತೊಂದು ತನಿಖಾ ತಂಡ ರಚಿಸಿ ವರದಿ ಸಲ್ಲಿಸುವಂತೆ ತಾ.ಪಂ ಇಒ ಆದೇಶಿಸಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಒಕ್ಕೂಟಗಳ ಕಾರ್ಯನಿರ್ವಹಣೆಯ ಕುರಿತು ಕಾಲಕಾಲಕ್ಕೆ ಪರಿಶೀಲನೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಬೇಕಾದ ತಾಲ್ಲೂಕು ಮಟ್ಟದ ಕಾರ್ಯಕ್ರಮಗಳ ವ್ಯವಸ್ಥಾಪಕರು ಸರಿಯಾಗಿ ಕೆಲಸ ಮಾಡದೇ ಉದಾಸೀನ ತೋರಿದ್ದರಿಂದ ಸುಮಾರು ಒಂದೂವರೆ ವರ್ಷಗಳಿಂದಲೂ ಹಣಕಾಸಿನ ಲೆಕ್ಕಪತ್ರಗಳಿಲ್ಲದೆ ದುರ್ಬಳಕೆಯಾಗಿದೆ.

ಮುಖ್ಯ ಬರಹಗಾರ್ತಿ ಹಣ ದುರುಪಯೋಗ ಮಾಡಿಕೊಂಡ ಬಗ್ಗೆ ಗ್ರಾಮಸ್ಥರು ದೂರು ನೀಡಿದ ಕಾರಣ ಈ ಪ್ರಕರಣ ಬಯಲಿಗೆ ಬಂದಿತ್ತು. ಆದರೆ, ಕಾರ್ಯಕ್ರಮಗಳ ಅನುಷ್ಠಾನದ ಜವಾಬ್ದಾರಿ ಹೊತ್ತ ಅಧಿಕಾರಿಯ ಬೇಜವಾಬ್ದಾರಿತನ ಎದ್ದು ಕಾಣುತ್ತಿದ್ದರೂ ಅವರನ್ನೇ ತನಿಖಾ ತಂಡದ ಸದಸ್ಯರನ್ನಾಗಿ ನಿಯೋಜಿಸಿದ್ದನ್ನು ಗಮನಿಸಿದರೆ, ವ್ಯವಸ್ಥಿತ ರೀತಿಯಲ್ಲಿ ಈ ಪ್ರಕರಣವನ್ನು ಮುಚ್ಚಿ ಹಾಕುವ ಎಲ್ಲ ಪ್ರಯತ್ನ ನಡೆಯುತ್ತಿದೆ. ಹಣ ದುರ್ಬಳಕೆಯ ಬಗ್ಗೆ ಸರ್ಕಾರದ ಗಮನಕ್ಕೆ ತರುವಲ್ಲಿ ವಿಫಲರಾದವರು, ತನಿಖೆಯನ್ನು ಯಾವ ರೀತಿ ಕೈಗೊಂಡು ವರದಿ ತಯಾರಿಸಬಲ್ಲರು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಒಕ್ಕೂಟದಲ್ಲಿ ಹಣ ದುರ್ಬಳಕೆಯಾಗಿದ್ದರಿಂದಲೇ ಈಗಾಗಲೇ ತನಿಖೆ ನಡೆಸಿ, ಸರ್ಕಾರಕ್ಕೆ ವರದಿ ಮಾಡಿದ್ದರೂ ಕ್ರಮಕೈಗೊಳ್ಳದೇ ಮತ್ತೊಂದು ಸಮಿತಿ ರಚನೆ ಮಾಡಿದ್ದು ಸರಿಯಲ್ಲ. ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿಗಳ ಮುಖಾಂತರ ಪ್ರಕರಣವನ್ನು ಮುಕ್ತಾಯಗೊಳಿಸುವ ಸರ್ವ ಪ್ರಯತ್ನ ನಡೆಯುತ್ತಿದೆ.

ಜಿಲ್ಲಾಮಟ್ಟದ ಅಧಿಕಾರಿಗಳು ಈ ಬಗ್ಗೆ ವಿಶೇಷ ಕಾಳಜಿವಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು. ಉಸ್ತುವಾರಿ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮವನ್ನು ಜರುಗಿಸುವುದು. ತಾಲ್ಲೂಕಿನ ವಿವಿಧ ಮಹಿಳಾ ಒಕ್ಕೂಟಗಳ ಕಾರ್ಯನಿರ್ವಹಣೆಯ ಬಗ್ಗೆ ಲೆಕ್ಕಪರಿಶೋಧನೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಒಕ್ಕೂಟಗಳ ಮೂಲ ಉದ್ದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮುಂದಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಬಸವರಾಜ ಬೊಮ್ಮನಾಳ, ಹನಮಂತಪ್ಪ, ಮಲ್ಲಿಕಾರ್ಜುನಗೌಡ ಸೇರಿ ಅನೇಕರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.