ಕೊಪ್ಪಳ: ’ಬಹುಮತಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಹೊಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಸಮ್ಮಿಶ್ರ ಸರ್ಕಾರ ನಡೆಸುತ್ತಿರುವ ಕೇಂದ್ರ ತೀವ್ರ ನಿಗಾ ಘಟಕ (ಐಸಿಯು)ನಲ್ಲಿ ಉಸಿರಾಡುತ್ತಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
.ವಿದ್ಯಾರ್ಥಿಗಳು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು: ಸಚಿವ ಸಂತೋಷ ಲಾಡ್.
ಪಕ್ಷದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ ‘ಒಂದು ವೇಳೆ ಚಂದ್ರಬಾಬು ನಾಯ್ಡು ಕೈಕೊಟ್ಟರೆ ಕೇಂದ್ರ ಸರ್ಕಾರ ಪತನವಾಗುತ್ತದೆ. ಬಿಜೆಪಿ ನಾಯಕರು ನಮ್ಮ ಸರ್ಕಾರ ಹಾಗೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಿರಂತರ ಪ್ರಶ್ನೆಗಳನ್ನು ಮಾಡುತ್ತಲೇ ಇದ್ದಾರೆ. ಅವರಿಗೆ ನಾವು ತಕ್ಕ ಉತ್ತರ ನೀಡುತ್ತಿದ್ದೇವೆ. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮ 75ನೇ ವರ್ಷಕ್ಕೆ ರಾಜೀನಾಮೆ ನೀಡುವರೇ? ಇದನ್ನು ಬಿಜೆಪಿ ನಾಯಕರು ಪ್ರಧಾನಿಗೆ ಕೇಳುವರೇ’ ಎಂದು ಪ್ರಶ್ನಿಸಿದರು.
.ಗೋಮಾಂಸ ರಫ್ತು ತಡೆಯಲು ಸಾಧ್ಯವಾಗಿಲ್ಲ ಏಕೆ?: ಬಿಜೆಪಿಗೆ ಸಂತೋಷ ಲಾಡ್ ಪ್ರಶ್ನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.