ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

Last Updated 3 ಜನವರಿ 2021, 12:38 IST
ಅಕ್ಷರ ಗಾತ್ರ

ಗಂಗಾವತಿ: ನಗರದ ಎಸ್‌ಎಫ್‌ಐ ಕಚೇರಿ ಆವರಣದಲ್ಲಿ ಭಾನುವಾರ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ 190ನೇ ಜಯಂತಿ ಆಚರಿಸಲಾಯಿತು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಅಮರೇಶ ಕಡಗದ್‌ ಮಾತನಾಡಿ,‘ಸಾವಿತ್ರಿಬಾಯಿ ಫುಲೆ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ದುಡಿದರು. ಸಗಣಿ, ಕಲ್ಲುಗಳಿಂದ ಹೊಡೆಸಿಕೊಂಡು ಅವಮಾನಗಳನ್ನು ಸಹಿಸಿದರು. ಶಿಕ್ಷಣ ನೀಡಿ ಮಾತೆಯಾದರು. ಸರ್ಕಾರ ಅವರ ಜಯಂತಿಯನ್ನು ಮಹಿಳಾ ಶಿಕ್ಷಕರ ಜಯಂತಿಯನ್ನಾಗಿ ಆಚರಣೆ ಮಾಡಬೇಕು’ ಎಂದರು.

ತಾಲ್ಲೂಕು ಘಟಕದ ಅಧ್ಯಕ್ಷ ಗ್ಯಾನೇಶ್ ಕಡಗದ್‌, ಕಾರ್ಯದರ್ಶಿ ಶಿವಕುಮಾರ, ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ ಬೆಣಕಲ್, ಹನುಮಂತ, ಫಕಿರೇಶ, ಸಿದ್ದು, ಸೋಮನಾಥ, ಮಂಜುನಾಥ ಹಾಗೂ ಉಮೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT