ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ಪುನರಾರಂಭ; ಚರ್ಚಿಸಿ ನಿರ್ಧಾರ

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ
Last Updated 5 ಜೂನ್ 2020, 15:14 IST
ಅಕ್ಷರ ಗಾತ್ರ

ಕುಷ್ಟಗಿ: ಶಾಲೆಗಳನ್ನು ಪುನರಾಂಭಿಸುವ ವಿಚಾರಕ್ಕೆ ಸಬಂಧಿಸಿದಂತೆ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಶುಕ್ರವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೂರು ತಿಂಗಳವರೆಗೂ ಶಾಲೆ ತೆರೆಯುವುದು ಬೇಡ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು, ಬೆಳಿಗ್ಗೆ ಒಂದು ಸಂಜೆಗೆ ಮತ್ತೊಂದು ಹೇಳಿಕೆ ಬದಲಿಸುತ್ತ ಹೋಗುತ್ತಾರೆ. ಅದೇ ರೀತಿ ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರ ಹೇಳಿಕೆಗಳು ತದ್ವಿರುದ್ಧವಾಗಿರುತ್ತವೆ. ಶಾಲೆ ತೆರೆಯುವ ವಿಚಾರದಲ್ಲಿ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ವಿರೋಧ ಪಕ್ಷದವರು ಸಲಹೆ ನೀಡಲಿ ನಂತರ ಎಲ್ಲರೂ ಒಟ್ಟಿಗೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಸರ್ಕಾರ ಸುಭದ್ರವಾಗಿದೆ. ಎಲ್ಲ ಸಚಿವರೂ ಸಮನ್ವಯತೆಯಿಂದ ಕೆಲಸ ಮಾಡುತ್ತಿದ್ದಾರೆ. ಆಡಳಿತಾತ್ಮಕ ವಿಷಯದಲ್ಲಿ ವಿರೋಧ ಪಕ್ಷಗಳ ಸಹಕಾರ ಅಗತ್ಯವಾಗಿದ್ದರೂ ಕೆಲವರು ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಆಯ್ಕೆ ಪಕ್ಷಕ್ಕೆ ಕಗ್ಗಂಟು ಆಗಿಲ್ಲ. ಶನಿವಾರ ಸಂಜೆ ಬಿಜೆಪಿ ಕೋರ್‌ ಸಮಿತಿ ಸಭೆ ನಡೆಯಲಿದ್ದು ಅದರಲ್ಲಿ ಅಭ್ಯರ್ಥಿ ವಿಚಾರ ಅಂತಿಮಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಯತೀಂದ್ರ ಸೂಪರ್‌ ಸಿಎಂ ಆಗಿದ್ದರೆ?:

ಬಿಜೆಪಿಯಲ್ಲಿ ವಿಜಯೇಂದ್ರ ಸೂಪರ್ ಸಿಎಂ ಆಗಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೆ.ಎಸ್‌.ಈಶ್ವರಪ್ಪ, ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಪುತ್ರ ಯತೀಂದ್ರ ಎಂಥದ್ದೂ ಆಗಿದ್ದಿಲ್ಲ. ಆದರೂ ಸರ್ಕಾರಿ ಕಾರ್ ದುರ್ಬಳಕೆ ಮಾಡಿಕೊಂಡು ಕಾರ್ಪೊರೇಶನ್ ಸಭೆ ನಡೆಸಿದ್ದರಲ್ಲ. ಆಗ ಯತೀಂದ್ರ ಸೂಪರ್ ಮುಖ್ಯಮಂತ್ರಿಯಾಗಿದ್ದರೆ? ಇದಕ್ಕೆ ಅವರೇ ಉತ್ತರ ನೀಡಲಿ ಎಂದು ಸವಾಲು ಹಾಕಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ದೊಡ್ಡನಗೌಡ ಪಾಟೀಲ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ, ಬಸವರಾಜ ಧಡೇಸಗೂರು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಸವರಾಜ ಹಳ್ಳೂರು ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT