ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಮಕ್ಕಳಿಗೆ ಶಾಲೆಯ ಶಿಕ್ಷಕರು ಪುಷ್ಪಾರ್ಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಸೋಮವಾರ ಆರಂಭಗೊಂಡ 5ರಿಂದ 8ನೇ ತರಗತಿ ಶಾಲೆ ಮಕ್ಕಳಿಗೆ ಶಾಲೆಯ ಶಿಕ್ಷಕರು ಪುಷ್ಪಾರ್ಚನೆ ಮಾಡುವ ಮೂಲಕ ಸಂಭ್ರಮದಿಂದ ಸ್ವಾಗತಿಸಿದರು.

ಶಾಲೆಯ ಮುಖ್ಯಶಿಕ್ಷಕ ಬೀರಪ್ಪ ಅಂಡಗಿ ಮಾತನಾಡಿ, ಶಾಲೆಯನ್ನು ಈಗಾಗಲೇ ಸ್ಯಾನಿಟೈಜೇಶನ್ ಮಾಡಲಾಗಿದೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಪಾಠವನ್ನು ಆರಂಭಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಮಕ್ಕಳು ಇಲ್ಲದೆ ಬೀಕೋ ಎನ್ನುತ್ತಿತ್ತು. ಈ ಸಂದರ್ಭದಲ್ಲಿ ಶಾಲೆಯ ದುರಸ್ತಿ ಕಾಮಗಾರಿ ಮಾಡುವ ಮೂಲಕ ಲಾಕ್ ಡೌನ್ ಸಂದರ್ಭದಲ್ಲಿ ಮಾದರಿ ಕೆಲಸ ಮಾಡಿದ್ದೇವೆ ಎಂದರು.

ಮಕ್ಕಳ ಹಿತದೃಷ್ಟಿಯಿಂದ ಶಾಲೆ ಆರಂಭಿಸಿದ್ದು ಒಳ್ಳೆಯ ನಿರ್ಧಾರ. ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಶಾಲೆಗೆ ಬಂದ ಮಕ್ಕಳಿಗೆ ಪೆನ್, ಮಾಸ್ಕ್ ಕೂಡಾ ವಿತರಿಸಲಾಗಿದೆ. ಕೆಲವು ಕಡೆ ಪಠ್ಯಪುಸ್ತಕವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ಶಾಲೆಗಳನ್ನು ತಳಿರು ತೋರಣಗಳಿಂದ  ಅಲಂಕರಿಸಲಾಗಿತ್ತು. ಶಾಲಾ ಆವರಣ ಮಕ್ಕಳ ಕಲರವದಿಂದ ತುಂಬಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.