ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಅಗತ್ಯ: ದೀನ್‍ ದಯಾಳ್ ಶಿರೋಳ ಹೇಳಿಕೆ

Last Updated 29 ಫೆಬ್ರುವರಿ 2020, 14:14 IST
ಅಕ್ಷರ ಗಾತ್ರ

ಯಲಬುರ್ಗಾ: ‘ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ವಿಜ್ಞಾನ ಕುರಿತ ಕಾರ್ಯಾಗಾರಗಳು ಅನುಕೂಲವಾಗಲಿವೆ’ ಎಂದು ಗುಡ್ ಶಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ದೀನ್‍ ದಯಾಳ್ ಶಿರೋಳ ಹೇಳಿದರು.

ತಾಲ್ಲೂಕಿನ ಹೊರವಲಯದಲ್ಲಿರುವ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ವಸ್ತು ಪ್ರದರ್ಶನ ಹಾಗೂ ವಿಜ್ಞಾನ ಕುರಿತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ ಸಿ.ವಿ. ರಾಮನ್ ಅವರ ಜನ್ಮದಿನದ ಪ್ರಯುಕ್ತ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ದೇಶ ಕಂಡ ಖ್ಯಾತ ವಿಜ್ಞಾನಿಗೆ ಗೌರವ ಸಲ್ಲಿಸಬೇಕಾಗಿದೆ ಎಂದು ಹೇಳಿದರು.

ಮುಖ್ಯ ಶಿಕ್ಷಕಿ ಗೌರಮ್ಮ ಪಾಟೀಲ ಮಾತನಾಡಿ,‘ವಿಜ್ಞಾನದ ಕುರಿತು ಆಸಕ್ತಿ ಮೂಡಿಸಿಕೊಳ್ಳಬೇಕಾದರೆ ಮೊದಲು ಪ್ರಶ್ನೆ ಮಾಡುವುದನ್ನು ರೂಢಿಸಿಕೊಳ್ಳಬೇಕು’ ಎಂದರು.

ಶಿಕ್ಷಕ ಮಹೇಶ ಪಟ್ಟೇದ ಮಾತನಾಡಿದರು.

ವಿದ್ಯಾರ್ಥಿಗಳು ವಸ್ತು ಪ್ರದರ್ಶನ ಹಮ್ಮಿಕೊಂಡಿದ್ದರು. ಈ ವೇಳೆ ಅಲ್ಲಿಯ ವಿಜ್ಞಾನ ಶಿಕ್ಷಕರು ಮಾರ್ಗದರ್ಶಕರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT