ಕೊಪ್ಪಳ: ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಂಖ್ಯೆಗಳನ್ನು ಹೆಚ್ಚಿಸಬೇಕು. ಅದರಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಹೇಳಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ 2024-25ನೇ ಸಾಲಿನ ಜಿಲ್ಲಾ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಯಪಾಲನೆ ಕಲಿಸುವ ಮಹತ್ವದ ಸಂಸ್ಥೆಯಾಗಿದೆ. ಹಾಗಾಗಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಇದರ ಘಟಕಗಳನ್ನು ಆಹ್ವಾನಿಸಬೇಕು. ಜಿಲ್ಲಾ ಸಂಸ್ಥೆಯವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗ ಪಡೆದುಕೊಳ್ಳಬೇಕು’ ಎಂದರು.

‘ಘಟಕಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು, ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಪ್ರಮುಖ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಅಭ್ಯರ್ಥಿಗಳು ಸ್ವಯಂಪ್ರೇರಿತವಾಗಿ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಸಮವಸ್ತ್ರವನ್ನು ಕೊಪ್ಪಳ ಜಿಲ್ಲೆಯ ಸಂಜೀವಿನಿ ಮತ್ತು ಎನ್.ಆರ್.ಎಲ್.ಎಂ ಮಹಿಳಾ ಸ್ವಸಹಾಯ ಸಂಘಗಳಿಂದ ಪಡೆದುಕೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾ ತರಬೇತಿ ಸ್ಕೌಟ್ಸ್ ಆಯುಕ್ತ ಶ್ರೀಕಾಂತ ಮಾಸಗಟ್ಟಿ ಮಾತನಾಡಿ, ‘ಸಂಸ್ಥೆಯು 75ನೇ ವರ್ಷಾಚರಣೆಯಲ್ಲಿದ್ದು, ಚೀಟಿ ಬಿಡುಗಡೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಕ್ಕಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುತ್ತಿದೆ. ರಾಜ್ಯ ಮಟ್ಟಡ ಜಾಂಬೋರೇಟ್ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯಲಿದ್ದು, ಅಲ್ಲಿಗೆ ಮಕ್ಕಳನ್ನು ಕರೆದುಕೊಂಡು ಹೋಗಲು ಅನುಮತಿ ನೀಡಬೇಕು’ ಎಂದರು.

ಸಭೆಯಲ್ಲಿ ಡಿಡಿಪಿಯು ಜಗದೀಶ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಪ್ಪಳ ಸಂಸ್ಥೆ ಉಪಾಧ್ಯಕ್ಷೆ ಅರುಣಾ ವಸ್ತ್ರದ, ಸಂಸ್ಥೆಯ ಜಿಲ್ಲಾ ಆಯುಕ್ತ ಮಲ್ಲಿಕಾರ್ಜುನ ಚೌಕಿಮಠ, ಜಿಲ್ಲಾ ಕಾರ್ಯದರ್ಶಿ ಮಾರುತಿ ಆರೇರ್, ಜಿಲ್ಲಾ ಜಂಟಿ ಕಾರ್ಯದರ್ಶಿ ದಾಕ್ಷಾಯಣಿ, ಜಿಲ್ಲಾ ಸಹಕಾರ್ಯದರ್ಶಿ ಪ್ರಭಾಕರ್, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ವೀರಪ್ಪ ಗಾಣಿಗೇರ್, ಅಲಿ ಹುಸೇನ್ ಹಾಗೂ ಮಲ್ಲಪ್ಪ, ಸಹಾಯಕ ರಾಜ್ಯ ಸಂಘಟನಾ ಆಯುಕ್ತ ಶರೀಫಸಾಬ ಹತ್ತಿಮತ್ತೂರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಜಿ., ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಬಸವರಾಜ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.