ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿ- ವಿಕಾಸ್ ಕಿಶೋರ್ ಸುರಳ್ಕರ್

ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆಯ ನಿಯಮಗಳ ಅನುಷ್ಠಾನ ಕಾರ್ಯಾಗಾರ
Last Updated 8 ಏಪ್ರಿಲ್ 2022, 4:49 IST
ಅಕ್ಷರ ಗಾತ್ರ

ಕೊಪ್ಪಳ: ಸರ್ಕಾರದ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆಗಳನ್ನು ನಿರ್ದಿಷ್ಟ ಫಲಾನುಭವಿಗಳಿಗೆ ತಲುಪುವ ಹಾಗೇ ಎಲ್ಲ ಅಧಿಕಾರಿಗಳು ಸಾಮಾಜಿಕ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರು ಎಸ್‌ಸಿಎಸ್‌ಪಿ/ ಟಿಎಸ್‌ಪಿ ಕೋಶದ ಸಹಯೊಗದಲ್ಲಿ 'ಎಸ್‌ಸಿಎಸ್‌ಪಿ/ ಟಿಎಸ್‌ಪಿ ಅಧಿನಿಯಮ 2013 ಮತ್ತು ನಿಯಮಗಳು 2017’ರ ಅನುಷ್ಠಾನದ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಗುರುವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ಮಾಡುವಂತಹ ವಿಷಯ ಶೋಚನೀಯ ವಿಚಾರವಾಗಿದೆ. ಇನ್ನೂ ಕೆಲವು ಹೊಟೇಲ್, ಕ್ಷೌರದಂಗಡಿಗಳಲ್ಲಿ ದಲಿತರಿಗೆ ಪ್ರವೇಶ ಇಲ್ಲದಿರುವುದು ಬೆಳಕಿಗೆ ಬಂದಿದೆ. ಆದ್ದರಿಂದ ಅಧಿಕಾರಿಗಳು ದಲಿತರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಬಲರಾಗಿಸಲು ಫಲಾನುಭವಿಗಳಿಗೆ ತಲುಪಿಸಲು ಕಾರ್ಯನಿರ್ವಹಿಸಬೇಕು ಎಂದರು.

ಕೋಶದ ಅಧಿಕಾರಿ ಉರ್ಮಿಳಾ ಮಾತನಾಡಿ, ರಾಜ್ಯದಲ್ಲಿ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಕಾಯ್ದೆಗೆ ಎಸ್.ಸಿ ಮತ್ತು ಎಸ್.ಟಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಹಂಚಿಕೆ ಮಾಡಿದೆ. ಇಡೀ ದೇಶದಲ್ಲಿಯೇರಾಜ್ಯ ಅನುದಾನ ಬಳಕೆಯಲ್ಲಿ 2ನೇ ಸ್ಥಾನದಲ್ಲಿದೆ. ಅನುದಾನವನ್ನು ವೈಯಕ್ತಿಕ
ಅಭಿವೃದ್ಧಿಗೆ, ಮೂಲ ಸೌಕರ್ಯಗಳ ಅಭಿವೃದ್ಧಿಗೆ, ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ, ಕಾರ್ಮಿಕ, ದೈಹಿಕ ಅಂಗವಿಕಲರಿಗೆ ಹಾಗೂ ಎಸ್ಸಿ ಮತ್ತು ಎಸ್ಟಿ ಸಂಬಂಧಿಸಿದ ಕಾಮಗಾರಿಗಳಿಗೆ ಹಂಚಿಕೆ ಮಾಡಲಾಗುತ್ತದೆ ಎಂದರು.

ಎಸ್‌ಸಿಎಸ್‌ಪಿ/ ಟಿಎಸ್‌ಪಿಗೆ 2013-14 ರಲ್ಲಿ ₹ 8,616.14 ಕೋಟಿ ಹಣ ಹಂಚಿಕೆಯಾಗಿದೆ. ಪ್ರಸ್ತುತ ಸಾಲಿನಲ್ಲಿ ₹ 28,234.32 ಕೋಟಿ ಹಣ ಹಂಚಿಕೆಯಾಗಿದೆ ಎಂದರು.

ಬೆಂಗಳೂರು ನೋಡಲ್ ಅಧಿಕಾರಿ ವೆಂಕಟಯ್ಯ ಮಾತನಾಡಿ, ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆಗೆ ಸಂಬಂಧಪಟ್ಟ ಅನುದಾನವನ್ನು ಜಿಲ್ಲಾ ಮಟ್ಟ ಇಲಾಖೆಗಳು ಹೇಗೆ ಬಳಕೆ ಮಾಡುತ್ತಿವೆ ಎಂದು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸುರೇಶ್ ಕುಮಾರ್, ಜಿಪ ಸಿಇಒ ಬಿ.ಫೌಜಿಯಾ ತರನ್ನುಮ್,ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ್ ಶಿಂತ್ರೆ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT