ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಎಸ್‌ಡಿಪಿಐ ವತಿಯಿಂದ ನಾಳೆ ಧರಣಿ

Published 10 ಅಕ್ಟೋಬರ್ 2023, 7:39 IST
Last Updated 10 ಅಕ್ಟೋಬರ್ 2023, 7:39 IST
ಅಕ್ಷರ ಗಾತ್ರ

ಕೊಪ್ಪಳ: ಕಾಂತರಾಜ ಆಯೋಗದ ವರದಿಯನ್ನು ಅಂಗೀಕರಿಸಿ ತಕ್ಷಣವೇ ಜಾರಿಗೊಳಿಸಬೇಕು ಹಾಗೂ ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ 2ಬಿ ಮೀಸಲಾತಿಯನ್ನು ವಾಪಸ್‌ ನೀಡಿ ಮೀಸಲಾತಿ ಪ್ರಮಾಣವನ್ನು ಶೇ 8ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಸಂಘಟನೆ ಬುಧವಾರ ಬೆಳಿಗ್ಗೆ 10.30ಕ್ಕೆ ಇಲ್ಲಿನ ಗಂಜ್‌ ಸರ್ಕಲ್‌ನಲ್ಲಿ ಕುಷ್ಟಗಿ ಮಾರ್ಗದಲ್ಲಿ ಧರಣಿ ಹಮ್ಮಿಕೊಂಡಿದೆ.

‘ಚುನಾವಣಾ ಪೂರ್ವದಲ್ಲಿ ಕಾಂಗ್ರಸ್‌ ಪಕ್ಷ ಮೀಸಲಾತಿ ವಿಚಾರವಾಗಿ ನಮಗೆ ನೀಡಿರುವ ಭರವಸೆಯನ್ನು ಈಡೇರಿಸಬೇಕು. ಇದರಿಂದ ಮುಸ್ಲಿಂ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾದಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ’ ಎಂದು ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಉಜೂರ್‌ ಅಹಮದ್‌ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮಧ್ಯಾಹ್ನ 2.30ರ ತನಕ ಧರಣಿ ನಡೆಸಿ ಬಳಿಕ ಮನವಿ ಸಲ್ಲಿಸಲಾಗುತ್ತದೆ.

‘ಕಾಂಗ್ರೆಸ್ ಪಕ್ಷ ಚುನಾವಣೆಯ ಸಮಯದಲ್ಲಿ ನಮ್ಮನ್ನು ಮತ ಬ್ಯಾಂಕ್‌ ಆಗಿ ಬಳಸಿಕೊಂಡು ಕೈ ಬಿಟ್ಟಿದೆ. ಬಿಹಾರ ಮಾಡಿದಂತೆಯೇ ರಾಜ್ಯದಲ್ಲಿಯೂ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕು, ಅದನ್ನು ಅನುಷ್ಠಾನಕ್ಕೂ ತರಬೇಕು. ಗಣತಿಯನ್ನು ಬಹಿರಂಗ ಪಡಿಸಬೇಕು’ ಎಂದು ಅವರು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯುಸೂಫ್‌ ಮೋದಿ, ಸಂಘಟನಾ ಕಾರ್ಯದರ್ಶಿ ನಿಜಾಮುದ್ದೀನ್‌ ಮಾಳೆಕೊಪ್ಪ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮೊಹಮ್ಮದ್‌ ಸಾಧಿಕ್‌, ಸದಸ್ಯ ನಿಜಾಮುದ್ದೀನ್‌ ಸಲೀಂ ಖಾದ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT