ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಕೋಮು ವಿವಾದ ಸೃಷ್ಟಿ: ಎಸ್‌ಡಿಪಿಐ ಕಾರ್ಯಕರ್ತರ ಪ್ರತಿಭಟನೆ

Last Updated 18 ಮೇ 2022, 4:11 IST
ಅಕ್ಷರ ಗಾತ್ರ

ಗಂಗಾವತಿ: ಬಿಜೆಪಿ ಪಕ್ಷ ಕೇಂದ್ರ ಮತ್ತು ರಾಜ್ಯದಲ್ಲಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ಕಾರ್ಯಕರ್ತರು ನಗರದ ಕೃಷ್ಣದೇವರಾಯ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಮ್ ಮನಿಯಾರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಏಕರೂಪದ ಆಡಳಿತ ನಡೆಸುತ್ತಿದೆ. ದೇಶದಲ್ಲಿ ಎಲ್ಲ ಜಾತಿಯ ಜನರು ವಾಸ ಮಾಡುತ್ತಿದ್ದಾರೆ, ಮೋದಿ ನೇತೃತ್ವದ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ಪದೆ ಪದೆ ತೊಂದರೆ ನೀಡುತ್ತಿದೆ ಎಂದರು.

ಬಿಜೆಪಿ ಸರ್ಕಾರ ಮುಸ್ಲಿಮರ ಧಾರ್ಮಿಕ ಕೇಂದ್ರಗಳನ್ನು ಧ್ವಂಸ ಮಾಡಲೆಂದೆ ಆಡಳಿತ ನಡೆಸುತ್ತಿದೆ. ಸದ್ಯ ವಾರಣಾಸಿಯಲ್ಲಿನ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎನ್ನುವ ಉದ್ದೇಶದಿಂದ ನ್ಯಾಯಾಲಯವು ಮಸೀದಿಯ ಒಂದು ಭಾಗ ಮುಚ್ಚಲು ಆದೇಶ ನೀಡಿದ್ದು ಖಂಡನೀಯವಾಗಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಬಿಜೆಪಿ ವಿವಾದಗಳನ್ನು ಸೃಷ್ಟಿಸಿ ದೇಶದಲ್ಲಿ ಅಶಾಂತಿ ವಾತಾವರಣ, ಗೊಂದಲ, ಗಲಭೆಗಳನ್ನು ನಿರ್ಮಾಣ ಮಾಡಲು ಮುಂದಾಗುತ್ತಿದೆ. ಕೂಡಲೇ ಬಿಜೆಪಿ ಪಕ್ಷದ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಾಗುತ್ತದೆ ಎಂದರು.

ಈ ವೇಳೆಯಲ್ಲಿ ಸಂಘಟನೆ ಕಾರ್ಯಕರ್ತರಾದ ಮೈಬೂಬ್, ಶಾಮೀದ್, ಅಜಮೀರ್ ಸಿಂಗನಾಳ, ಗೌಸ್ ಮೈನೂದ್ದೀನ್, ಪಯಾಜ್, ಅಲ್ತಪ್ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT