ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀಜ ವಿತರಣೆ: ರೈತರಿಗೆ ತೊಂದರೆ ಆಗದಿರಲಿ

ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮ: ಶಾಸಕ ಪರಣ್ಣ ಮುನವಳ್ಳಿ ಸೂಚನೆ
Last Updated 29 ಮೇ 2021, 11:48 IST
ಅಕ್ಷರ ಗಾತ್ರ

ವೆಂಕಟಗಿರಿ (ಗಂಗಾವತಿ): ‘ರೈತರು ಸದ್ಯ ಬಿತ್ತನೆ ಕಾರ್ಯ ಆರಂಭ ಮಾಡಿದ್ದಾರೆ. ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಶಾಸಕ ಪರಣ್ಣ ಮುನವಳ್ಳಿ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ವೆಂಕಟಗಿರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಶನಿವಾರ ನಡೆದ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲ್ಲೂಕಿನ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ರೈತರು ಜಮೀನುಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ. ಅವರ ಅನುಕೂಲಕ್ಕೆ ತಕ್ಕ ಹಾಗೆ ಅಧಿಕಾರಿಗಳು ಬೀಜ ವಿತರಣೆ ಮಾಡಬೇಕು. ಕಳಪೆ ಗುಣಮಟ್ಟದ ಬೀಜ ವಿತರಣೆ ಮಾಡುವಂತಿಲ್ಲ. ಒಂದು ವೇಳೆ ಬೀಜ ಕಳಪೆ ಇರುವುದು ಗಮನಕ್ಕೆ ಬಂದರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದರು.

ನಂತರ ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡಲಾಯಿತು.

ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೆರುದ್ರಸ್ವಾಮಿ, ಪ್ರಮುಖರಾದ ಚನ್ನಪ್ಪ ಮಳಗಿ, ಸಿದ್ಧಲಿಂಗಯ್ಯ, ಶರಣಯ್ಯಸ್ವಾಮಿ, ಆರ್.ದೇವಾನಂದ್, ಅಮರೇಗೌಡ್ರು ಹಾಗೂ ಮಂಜುನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT