ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಬೇತಿಗೆ ಅಭ್ಯರ್ಥಿಗಳ ಆಯ್ಕೆ

Last Updated 19 ಸೆಪ್ಟೆಂಬರ್ 2021, 13:59 IST
ಅಕ್ಷರ ಗಾತ್ರ

ಹನುಮಸಾಗರ: ‘ವಿದ್ಯಾರ್ಥಿಗಳು ಸಂಶೋಧನಾತ್ಮಕ ಗುಣ ಬೆಳೆಸಿಕೊಂಡರೆ ಕೈಗಾರಿಕಾ ಕ್ಷೇತ್ರದಲ್ಲಿ, ಉದ್ದಿಮೆಗಳಲ್ಲಿ ಉದ್ಯೋಗ ಪಡೆಯಬಹುದು ಅಥವಾ ಸ್ವಂತ ಉದ್ದಿಮೆದಾರರಾಗಬಹುದು’ ಎಂದು ಪ್ರಭಾರ ಪ್ರಾಚಾರ್ಯ ವಿ.ಎಮ್.ಕಾಳಗಿ ಹೇಳಿದರು.

ಸಮೀಪದ ಮನ್ನೇರಾಳ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕಿರ್ಲೋಸ್ಕರ್ ಕಂಪನಿಯಿಂದ ಹಮ್ಮಿಕೊಳ್ಳಲಾಗಿದ್ದ ಎ.ಟಿ.ಎಸ್ ತರಬೇತಿಗಾಗಿ ಅಭ್ಯರ್ಥಿಗಳ ಆಯ್ಕೆ ಶಿಬಿರದಲ್ಲಿ ಅವರು ಮಾತನಾಡಿದರು.

ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದ ಮೂಲಕ ಐ.ಟಿ.ಐ. ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಎ.ಟಿ.ಎಸ್ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಯಿತು.

ಸಂದರ್ಶನದಲ್ಲಿ 150ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದರು.

ಕಿರ್ಲೋಸ್ಕರ್ ಕಂಪನಿಯ ಅಧಿಕಾರಿಗಳಾದ ಮೇಘರಾಜ, ಹರೀಶ ಹಾಗೂ ರವಿ ಅವರು ಸಂದರ್ಶನ ಹಾಗೂ ಲಿಖಿತ ಪರೀಕ್ಷೆ ತೆಗೆದುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡರು.

ಕಿರಿಯ ತರಬೇತಿ ಅಧಿಕಾರಿಗಳಾದ ರಾಠೋಡ ದಿಲೀಪ್‍ ಖೇಮು, ಅತಿಥಿ ಉಪನ್ಯಾಸಕರಾದ ಝಡ್.ಎಮ್.ಮುಲ್ಲಾ, ವಿಜಯಮಾಹಾಂತೇಶ ಹಾಗೂ ಕರೀಮಸಾಬ ಬಳೂಟಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT