ಸೋಮವಾರ, ಮಾರ್ಚ್ 20, 2023
30 °C
ವರ್ಗಾವಣೆಗೊಂಡ ಜಿ.ಪಂ. ಸಿಇಒ ರಘುನಂದನ್ ಮೂರ್ತಿಗೆ ಬೀಳ್ಕೊಡುಗೆ

‘ಉತ್ತಮ ಕೆಲಸ ಮಾಡಿದ ತೃಪ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಬೆಂಗಳೂರಿನ ವಾಣಿಜ್ಯ (ಜಾರಿ) ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆಯಾಗಿರುವ ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನ್ ಮೂರ್ತಿ ಅವರನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.

ರಘುನಂದನ್ ಮೂರ್ತಿ ಮಾತನಾಡಿ,‘ಜಿಲ್ಲೆಯ ಎಲ್ಲ ಅಧಿಕಾರಿಗಳೂ ಉತ್ತಮ ಸಹಕಾರ ನೀಡಿದ್ದು, ಒಂದು ತಂಡವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಸೇವೆ ನೀಡಿದ ತೃಪ್ತಿ ಇದೆ. ಶಿಕ್ಷಣ ಇಲಾಖೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಉತ್ತಮ ಕೆಲಸ ಮಾಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೂ ಅಪೌಷ್ಟಿಕ ಮಕ್ಕಳಿಗೆ ಸಂಬಂಧಿಸಿದಂತೆ ಉತ್ತಮ ಕೆಲಸ ಮಾಡಿದೆ’ ಎಂದರು.

’ಜಲ ಜೀವನ್ ಮಿಷನ್ ಯೋಜನೆಯಡಿ ಪಿಡಿಒಗಳು ಉತ್ತಮ ಸಾಧನೆ ಮಾಡಿದ್ದಾರೆ. ಬದು ನಿರ್ಮಾಣ, ಕೆಲಸ ಕೊಡುವುದರಲ್ಲಿ ಜಿಲ್ಲೆ ಮೊದಲ 5 ಸ್ಥಾನಗಳಲ್ಲಿದೆ‘ ಎಂದರು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾತನಾಡಿ,‘ಜಿಲ್ಲಾಧಿಕಾರಿ ಮತ್ತು ಸಿಇಒ ನಡುವೆ ಎಷ್ಟು ಸಂಬಂಧ ಇರಬೇಕು. ಅದಕ್ಕಿಂತ ಹೆಚ್ಚು ಇತ್ತು. ರಘುನಂದನ್ ಮೂರ್ತಿಯವರು ಕೆಲಸದ ವಿಷಯವಾಗಿ ತುಂಬಾ ಶಿಸ್ತು ಮತ್ತು ಕ್ರಿಯಾಶೀಲತೆ ಹೊಂದಿದ್ದರು. ಒಂದು ತಂಡವಾಗಿ ಕೆಲಸ ಮಾಡಿದಾಗ ಯಶಸ್ಸು ಗಳಿಸುವುದು ಸುಲಭ ಎಂಬುವುದು ಮೂರ್ತಿಯವರ ಕಾರ್ಯವೇ ಸಾಕ್ಷಿಯಾಗಿದೆ’ ಎಂದರು.

ಎಸ್‌.ಪಿ ಟಿ.ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಐಎಎಸ್ ಅಧಿಕಾರಿ ಹೇಮಂತ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶರಣಬಸವರಾಜ, ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ ಹಾಗೂ ವಾಣಿ ರಘುನಂದನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು