ಕೊಪ್ಪಳ: ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಮೇಲಿನ ಆರೋಪ ಸಾಬೀತಾಗಿದ್ದು, ಅಪರಾಧಿಗೆ ಪೋಕ್ಸೊ ನ್ಯಾಯಾಲಯವು ಮೂರು ವರ್ಷ ಜೈಲು ಹಾಗೂ ₹15 ಸಾವಿರ ದಂಡ ವಿಧಿಸಿದೆ.
ಅಂಧ ಶಿಕ್ಷಕ ನಾನು ಪಾಟೀಲ ಎಂಬಾತ ಸಂಗೀತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ವಿದ್ಯಾರ್ಥಿನಿ ತನಗೆ ಕಣ್ಣು ಕಾಣುವುದಿಲ್ಲ, ಕೈ ಹಿಡಿದು ಶಾಲೆಯ ಮೇಲಿನ ಕೋಣೆಗೆ ಕರೆದುಕೊಂಡು ಹೋಗುವಂತೆ ಹೇಳಿದ್ದನ್ನೇ ದುರುಪಯೋಗ ಪಡಿಸಿಕೊಂಡ ಶಿಕ್ಷಕ ಶಾಲೆಯ ಮೇಲಿನ ಕೋಣೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಕುರಿತು ಕೊಪ್ಪಳ ಡಿವೈಎಸ್ಪಿ ಶ್ರೀಕಾಂತ ಬಿ. ಕಟ್ಟಿಮನಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕಿ ಬಂಡಿ ಅಪರ್ಣಾ ಮನೋಹರ ವಾದ ಮಂಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.