ಶನಿವಾರ, ಸೆಪ್ಟೆಂಬರ್ 18, 2021
28 °C
ಎಸ್‌ಎಫ್‌ಐ ಪದಾಧಿಕಾರಿಗಳಿಂದ ಪ್ರತಿಭಟನೆ

ಎರಡು ಸೆಮಿಸ್ಟರ್ ಪರೀಕ್ಷೆಗೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಮೊದಲನೇ ಹಾಗೂ 2ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ) ತಾಲ್ಲೂಕು ಸಮಿತಿ ಪದಾಧಿಕಾರಿಗಳು ನಗರದ ಶಾಸಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಸಂಘಟನೆಯ ತಾಲ್ಲೂಕು ಸಮಿತಿ ಅಧ್ಯಕ್ಷ ಗ್ಯಾನೇಶ್ ಕಡಗದ್ ಮಾತನಾಡಿ,‘ಸರ್ಕಾರ ಕೋವಿಡ್ ಕಾರಣ ರಾಜ್ಯದ ಎಲ್ಲ ವಿ.ವಿಗಳ ಪದವಿ ಮತ್ತು ಸ್ನಾತಕೋತ್ತರ ಪದವಿಯ 1, 3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿತ್ತು. ಲಾಕ್‌ಡೌನ್‌ ಆವಧಿಯಲ್ಲಿ 2, 4 ಮತ್ತು 6 ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಲಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು, ಇದರ ನಡುವೆ ಸರ್ಕಾರ ಮೊದಲನೇ ಸೆಮಿಸ್ಟೆರ್ ಜತೆಗೆ ಎರಡನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಖಂಡನೀಯ’ ಎಂದು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ನೆಟ್‍ವರ್ಕ್ ಸಮಸ್ಯೆಯಿಂದ ಕೆಲ ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಇಂಥ ಪರಿಸ್ಥಿತಿಯಲ್ಲಿ ಸರ್ಕಾರ ಪರೀಕ್ಷೆ ನಡೆಸುವುದು ಎಷ್ಟು ಸರಿ?. ಹಿಂದಿನ ವರ್ಷ ತೇರ್ಗಡೆ ಮಾಡಿದ ಹಾಗೇ ಈ ವರ್ಷವೂ ಕೂಡ 1, 2 ಮತ್ತು 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪಾಸ್ ಮಾಡಿ ಉಳಿದ 2, 4 ಹಾಗೂ 6 ನೇ ಸೆಮಿಸ್ಟರ್‌ಗಳಿಗೆ ಪರೀಕ್ಷೆ ಮಾತ್ರ ನಡೆಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಸಂಘಟನೆಯ ಪ್ರಮುಖರಾದ ಹನುಮಂತ ಮುಕ್ಕುಂಪಿ, ಸೋಮನಾಥ ಹಾಗೂ ಶಿವುಕುಮಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.