ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಇಡಿ ಪರೀಕ್ಷಾ ದಿನ ಬದಲಿಸಿ

ಎಸ್‌ಎಫ್‌ಐ ಪದಾಧಿಕಾರಿಗಳಿಂದ ತಹಶೀಲ್ದಾರ್‌ಗೆ ಮನವಿ
Last Updated 27 ಫೆಬ್ರುವರಿ 2021, 3:05 IST
ಅಕ್ಷರ ಗಾತ್ರ

ಕೊಪ್ಪಳ: ‘ಬಿ.ಇಡಿ 2ನೇ ಮತ್ತು4ನೇ ಸೆಮಿಸ್ಟರ್ ಪರೀಕ್ಷೆಗಳ ದಿನಾಂಕ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾ ಸಮಿತಿ ಮತ್ತು ಬಿ.ಇಡಿ ವಿದ್ಯಾರ್ಥಿಗಳು ತಹಶೀಲ್ದಾರ್‌ ಮೂಲಕ ವಿಜಯನಗರ ವಿ.ವಿ ಕುಲಪತಿಗೆ ಮನವಿ ಸಲ್ಲಿಸಿದರು.

‘ವಿ.ವಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮಾ.2ರಿಂದ ಆರಂಭವಾಗಿ 5ನೇ ತಾರೀಕಿಗೆ ಎಲ್ಲ ಹಂತದ ಪರೀಕ್ಷೆ ಮುಗಿಸಲು ಸೂಚಿಸಲಾಗಿದೆ. ಆದರೆ ಇದು ತುಂಬಾ ಅವೈಜ್ಞಾನಿಕವಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ತುಂಬಾ ಸಮಸ್ಯೆಯಾಗುತ್ತದೆ’ ಎಂದರು.

‘4ನೇ ಸೆಮಿಸ್ಟರ್ ಮತ್ತು ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳ ಪರೀಕ್ಷೆ ನಿಗದಿಯಾಗಿದ್ದು, ಕೆಲವೊಂದು ವಿದ್ಯಾರ್ಥಿಗಳು 2ನೇ ಸೆಮಿಸ್ಟರ್‌ನಲ್ಲಿ ಅನುತ್ತೀರ್ಣರಾಗಿದ್ದರು. ಈಗ ಅವರು 4ನೇ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಒಂದೇ ದಿನ ಬೆಳಿಗ್ಗೆ ಮತ್ತು ಮಧ್ಯಾಹ್ನ 4ನೇ ಸೆಮಿಸ್ಟರ್ ಹಾಗೂ ಎರಡನೇ ಸೆಮಿಸ್ಟರ್ ಪರೀಕ್ಷೆಗಳಿಗೆ ತಯಾರಿ ನಡೆಸಲು ಮತ್ತು ಒಂದೇ ದಿನ ಎರಡು ಪರೀಕ್ಷೆಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಸಮಸ್ಯೆವಾಗುತ್ತದೆ’ ಎಂದು ತಿಳಿಸಿದ್ದಾರೆ.

‘ಆದಷ್ಟು ಬೇಗ ಪರೀಕ್ಷೆಗಳನ್ನು ಮುಗಿಸಿಬೇಕೆಂಬ ಏಕೈಕ ಉದ್ದೇಶದಿಂದ ಪರೀಕ್ಷಾ ವೇಳಾಪಟ್ಟಿಯನ್ನು ಈ ರೀತಿ ನಿಗದಿ ಮಾಡುವುದು ಸರಿಯಾದ ಕ್ರಮವಲ್ಲ. ವಿದ್ಯಾರ್ಥಿಗಳ ಅನುಕೂಲ, ಹಿತದೃಷ್ಟಿಯಿಂದ ಪ್ರತಿಯೊಂದು ವಿಷಯದ ಪರೀಕ್ಷೆ ನಂತರ ಕನಿಷ್ಠ ಒಂದು ದಿನ ಮಧ್ಯೆ ಅಂತರ ಇರಬೇಕು. ದಿನಾಂಕ ಬದಲಾವಣೆ ಮಾಡದೇ ಇದ್ದರೆ ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನೆ ಮಾಡಲಾಗುವುದು’ ಎಂದು ಎಸ್‌ಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಸುಭಾನ್

ಯಮನೂರ್‌ಸಾಬ್‌ ಹೊಮ್ಮಿನಾಳ, ಹುಸೇನ್‌ಸಾಬ್‌ ಬನ್ನಿಗೋಳ, ಹನುಮೇಶ ವಾಲ್ಮೀಕಿ ಹಾಗೂ ಮಂಜುನಾಥ ಕುರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT