ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಶಕ್ತಿ ಅಭಿಯಾನದಿಂದ ಪಕ್ಷದ ಬಲವೃದ್ಧಿ'

ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಕಾರ್ಯಕ್ರಮಕ್ಕೆ ಚಾಲನೆ ಇಂದು
Last Updated 8 ಡಿಸೆಂಬರ್ 2018, 15:59 IST
ಅಕ್ಷರ ಗಾತ್ರ

ಕೊಪ್ಪಳ:ಡಿ.10 ರಂದು ಶಕ್ತಿ ಪ್ರಾಜೆಕ್ಟ್ ಕಾರ್ಯಾಗಾರವನ್ನು ಕೆಪಿಸಿಸಿ ಅಧ್ಯಕ್ಷದಿನೇಶ್ ಗುಂಡುರಾವ್ ಉದ್ಘಾಟಿಸಲಿದ್ದು, ಜಿಲ್ಲೆಯಲ್ಲಿ ಬಿಜೆಪಿಯನ್ನು ಕಿತ್ತು ಹೊರ ಹಾಕಲು ಕಾಂಗ್ರೆಸ್ ಪಕ್ಷವು ಕಾರ್ಯಕರ್ತರಿಗೆ ಹಾಗೂ ಪಕ್ಷದ ಎಲ್ಲ ನಾಯಕರಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಪೈಪೋಟಿಗ ವೇದಿಕೆ ಸಿದ್ಧಗೊಳ್ಳಿಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷಶಿವರಾಜ ತಂಗಡಗಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ಹಾಗೂ ದಿಕ್ಸೂಚಿ ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಬೃಹತ್ ಪ್ರಮಾಣದಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ಮೂಲಕ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಮನಸ್ತಾಪ ಹಾಗೂ ಒಳ ಜಗಳ ಇಲ್ಲ. ನಾವು ಒಂದೇ ಕುಟುಂಬದ ಸದಸ್ಯರು. ಒಗಟ್ಟಾಗಿ ಪಕ್ಷಕ್ಕೆ ದುಡಿಯುವ ಇಚ್ಛಾಶಕ್ತಿಯನ್ನು ಹೊಂದಿದ್ದೇವೆ. ಭಿನಾಭಿಪ್ರಾಯ ದೂರದ ಸಂಗತಿ, ನಮ್ಮ ಪಕ್ಷದ ಹಿರಿಯ ಮುಖಂಡ ಹಾಗೂ ಕಾರ್ಯಕರ್ತರ ಮಾರ್ಗದರ್ಶನ, ಸಲಹೆಯನ್ನು ಪಡೆದು ಜಿಲ್ಲಾ ಕಾಂಗ್ರೆಸ್ ಸಮಿತಿಯು ಪಕ್ಷವನ್ನು ಬಲವರ್ಧನೆ ಮಾಡುವ ಕಾರ್ಯವನ್ನು ಮಾಡುತ್ತದೆ ಎಂದು ತಿಳಿಸಿದರು.

ಇನ್ನೂ ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷವು ಸುಳ್ಳು ಹೇಳುವ ಕೆಲಸವನ್ನು ಬಿಟ್ಟರೆ ಮತ್ತೆ ಯಾವುದೇ ಕಾರ್ಯವನ್ನು ಮಾಡುತ್ತಿಲ್ಲ. ಇದಕ್ಕೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ. ಸಂಸದ ಸಂಗಣ್ಣ ಕರಡಿ ಜಿಲ್ಲೆಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದೆ ಜಿಲ್ಲೆಯಲ್ಲಿ ಒಬ್ಬ ಸಂಸದ ಇದ್ದಾರೆ ಎನ್ನುವುದನ್ನು ಜನರು ಮರೆತು ಹೋಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸಂಸದ ಕರಡಿಯನ್ನು ಕಾಡಿಗೆ ಕಳಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷವು ಮಾಡುತ್ತದೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಶ್ರೀಧರ ಕಲವೀರ್, ಬಿ.ಎಲ್.ಶಂಕರ, ಸೂರಜ್ ಹೆಗಡೆ ಪಾಲ್ಗೊಂಡು ಮಾತನಾಡುವರು.

ಪಕ್ಷದಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಾಜಶೇಖರ್ ಹಿಟ್ನಾಳ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷಾ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಗುರುಬಸವರಾಜ ಹಳ್ಳಿಕೇರಿ, ಪಕ್ಷದ ಮುಖಂಡರಾದ ಮಾನ್ವಿ ಪಾಷ, ಮತ್ತು ಪಕ್ಷದ ಜಿಲ್ಲಾ ವಕ್ತಾರ ರವಿ ಕುರುಗೋಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT