ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕರರು ಅಭಿವೃದ್ಧಿ ಕೆಲಸಗಳಿಗೆ ಕೈ ಜೋಡಿಸಿ: ಸಚಿವ ಶರಣಬಸಪ್ಪ ದರ್ಶನಾಪುರ

Published 27 ಜೂನ್ 2023, 14:16 IST
Last Updated 27 ಜೂನ್ 2023, 14:16 IST
ಅಕ್ಷರ ಗಾತ್ರ

ಶಹಾಪುರ: ‘ಜನಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರು ಸಮನ್ವಯದಿಂದ ಕೆಲಸ ಮಾಡಿದರೆ ಅಭಿವೃದ್ಧಿ ಸಾಧ್ಯ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿದರೆ ಉತ್ತಮ ಹೆಸರು ಬರುತ್ತದೆ’ ಎಂದು ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

ತಾಲ್ಲೂಕಿನ ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ವಿವಿಧ ವೃಂದದ ಸಂಘಗಳು ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ಸಚಿವ ಸ್ಥಾನ ದೊರಕಿದ್ದರಿಂದ ಒತ್ತಡ ಹೆಚ್ಚಿದ್ದು ಮತಕ್ಷೇತ್ರಕ್ಕೆ ಸಮಯ ನೀಡಲಾಗುತ್ತಿಲ್ಲ. ಸರ್ಕಾರಿ ನೌಕರರು ಹೆಚ್ಚು ಜವಾಬ್ದಾರಿಯಿಂದ ಜನರ ಕಷ್ಟಗಳಿಗೆ ತಕ್ಷಣವೇ ಸ್ಪಂದಿಸಬೇಕು. ಇದರಿಂದ ನನಗಿರುವ ಒತ್ತಡವೂ ಕಡಿಮೆಯಾಗುತ್ತದೆ ಹಾಗೂ ಮತಕ್ಷೇತ್ರದ ಅಭಿವೃದ್ಧಿಗೆ ಸಹಾಕಾರಿಯಾಗುತ್ತದೆ’ ಎಂದರು.

ಏಳನೇ ವೇತನ ಆಯೋಗ ಜಾರಿ, ಎನ್‌ಪಿಎಸ್ ರದ್ದು, ಕಲ್ಯಾಣ ಕರ್ನಾಟಕದಲ್ಲಿ ಹೆಚ್ಆರ್‌ಎಂಎಸ್ ಉಪವಿಭಾಗ ಕಚೇರಿ ಸ್ಥಾಪನೆ, ತಾಲ್ಲೂಕಿನಲ್ಲಿ ನೌಕರರ ಬಹುಮಹಡಿ ಕಟ್ಟಡ ನಿರ್ಮಿಸಿ ಕೊಡಬೇಕು ಎಂದು ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಯಪ್ಪಗೌಡ ಹುಡೇದ ಮನವಿ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ವಯೋನಿವೃತ್ತಿ ಹೊಂದಿದ ಶಾಂತಗೌಡ ಪಾಟೀಲ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿ ಬಸವರಾಜ ಸಿಂಗ್ರಿ ಅವರಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಜಿಲ್ಲಾ ಸಹಕಾರಿ ಒಕ್ಕೂಟಗಳ ಅಧ್ಯಕ್ಷ ವಿಶ್ವನಾಥರೆಡ್ಡಿ ದರ್ಶನಾಪುರ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಮಹಿಪಾಲರೆಡ್ಡಿ, ಇಒ ಸೋಮಶೇಖರ ಬಿರಾದಾರ, ಬಸವರಾಜ ಸಜ್ಜನ, ಬಿಇಒ ಶಿಬಾ ಜಿಲಿಯಾನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಚನ್ನಾರೆಡ್ಡಿ ತಂಗಡಗಿ, ಎಂ.ನಾರಾಯಣ, ಭೀಮನಗೌಡ ತಳೆವಾಡ, ಬಸವರಾಜ ಯಾಳಗಿ, ಎನ್.ಸಿ.ಪಾಟೀಲ, ಕಾವೇರಿ ಪಾಟೀಲ, ಚಂದ್ರಕಲಾ ಜಮಖಂಡಿ, ಚಂದ್ರಕಲಾ ಗೂಗಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT