ಕೊಪ್ಪಳ: ಬರಗಾಲದ ಸಮಯದಲ್ಲಿ ಮನರೇಗಾ ಯೋಜನೆಯಲ್ಲಿ ಒಂದು ಕುಟುಂಬಕ್ಕೆ ಗರಿಷ್ಠ 150 ದಿನಗಳ ತನಕ ಕೆಲಸ ನೀಡಲು ಅವಕಾಶವಿದ್ದರೂ ಕೇಂದ್ರ ಸರ್ಕಾರ ಅನುಮತಿ ಕೊಡುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸದ ನೆಪದಲ್ಲಿ ರೈತರ ಕಣ್ಣೊರೆಸುವ ತಂತ್ರ ಮಾಡುತ್ತಿದ್ದಾರೆ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬಿಜೆಪಿ ಮತ್ತು ಜೆಡಿಎಸ್‌ನಿಂದ ಶಾಸಕರು ಹಾಗೂ ಪ್ರಮುಖರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ. ನಾವು ಯಾರೂ ಆಪರೇಷನ್ ಮಾಡುತ್ತಿಲ್ಲ; ನಮ್ಮ ಪಕ್ಷದ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡು ಬರುತ್ತಿದ್ದಾರೆ’ ಎಂದರು.
‘2023–24ನೇ ಸಾಲಿನ ನರೇಗಾ ಯೋಜನೆಯಡಿ ವಾರ್ಷಿಕವಾಡಿ 82 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ಹೊಂದಲಾಗಿದ್ದು, ಇದುವರೆಗೆ 78.37 ಲಕ್ಷ ದಿನಗಳನ್ನು ಸೃಜಿಸಲಾಗಿದೆ. ಕೂಲಿ ಮತ್ತು ಸಾಮಗ್ರಿಗಾಗಿ ₹284.99 ಕೋಟಿ ಖರ್ಚು ಮಾಡಲಾಗಿದೆ. ಕೇಂದ್ರ ಅವಕಾಶ ಕೊಟ್ಟರೆ ಮನರೇಗಾದಡಿ ಇನ್ನಷ್ಟು ಕೆಲಸ ಕೊಡಲು ಸಾಧ್ಯವಾಗುತ್ತದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.