ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರಗ ಜ್ಞಾನೇಂದ್ರ ಕಲ್ಯಾಣ ಕರ್ನಾಟಕದ ಜನರ ಕ್ಷಮೆಯಾಚಿಸಲಿ: ಶಿವರಾಜ ತಂಗಡಗಿ

Published 5 ಆಗಸ್ಟ್ 2023, 7:56 IST
Last Updated 5 ಆಗಸ್ಟ್ 2023, 7:56 IST
ಅಕ್ಷರ ಗಾತ್ರ

ಕೊಪ್ಪಳ: ಕಸ್ತೂರಿರಂಗನ್ ವರದಿ ಜಾರಿ ಕುರಿತ ಅರಣ್ಯ ಸಚಿವರ ಹೇಳಿಕೆ ವಿರೋಧಿಸಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಕುರಿತು ನೀಡಿರುವ ಹೇಳಿಕೆಯಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅವಮಾನವಾಗಿದೆ. ಆದ್ದರಿಂದ ಅವರು ಈ ಭಾಗದ ಜನರ ಕ್ಷಮೆಯಾಚಿಸಬೇಕು ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಆಗ್ರಹಿಸಿದರು.

ಇಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ ಖರ್ಗೆ ಅವರು ಆಗಿನ ಹೈದರಾಬಾದ್ ಕರ್ನಾಟಕಕ್ಕೆ 371ಜೆ ಸ್ಥಾನಮಾನ ನೀಡಿ ಈ ಭಾಗವನ್ನು ಕಲ್ಯಾಣ ಕರ್ನಾಟಕವನ್ನಾಗಿ ಮಾಡಿದ್ದಾರೆ. ಅವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ಮಾತಮಾಡಿದ್ದು, ಈ ಭಾಗದ ಎಲ್ಲ ಜನರಿಗೆ ಮಾಡಿದ ಅವಮಾನದಂತೆ ಎಂದರು.

ಆರಗ ಜ್ಞಾನೇಂದ್ರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಮೋದಿ ಉಪನಾಮ ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಲಾಯಿತು. ಆದರೆ ಈಗ ಆರಗ ಜ್ಞಾನೇಂದ್ರ ಖರ್ಗೆ ಅವರಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಕಲ್ಯಾಣ ಕರ್ನಾಟಕದ ಜನ ಈ ಭಾಗವನ್ನು ಬಿಜೆಪಿ ಮುಕ್ತ ಮಾಡಬೇಕು ಎಂದರು.

ಸ್ಪರ್ಧಿಸಲ್ಲ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ನನಗೆ ಪಕ್ಷದಿಂದ ಯಾವುದೇ ಸೂಚನೆ ಬಂದಿಲ್ಲ. ಹೀಗಾಗಿ ಸ್ಪರ್ಧೆ ಮಾಡುವ ಪ್ರಶ್ನೆ ಇಲ್ಲ. ಒಂದು ವೇಳೆ ಪಕ್ಷ ಸ್ಪರ್ಧೆ ಮಾಡುವಂತೆ ಸೂಚಿಸಿದರೆ ಅದನ್ನು ಪಾಲಿಸಬೇಕಾಗುತ್ತದೆ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT