ಕೊಪ್ಪಳ: ಇಲ್ಲಿನ ಪ್ರಸಿದ್ಧ ಗವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಜ. 14ರ ಬದಲು ಇದೇ 31ರಂದು ಜಿಲ್ಲಾ ಮಟ್ಟದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ.

ವಿವಿಧ ಜಯಂತಿಗಳ ಆಚರಣೆ ಕುರಿತು ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಎಲ್ಲ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೂಚಿಸಿದರು.

‘ಗವಿಸಿದ್ಧೇಶ್ವರ ಜಾತ್ರೆ ಹಾಗೂ ಸಮಾಜದ ಮುಖಂಡರ ಕೋರಿಕೆಯ ಮೇರೆಗೆ ಸಿದ್ದರಾಮೇಶ್ವರ ಜಯಂತಿ ದಿನಾಂಕ ಬದಲಿಸಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬಳಿಕ ಸಾಹಿತ್ಯ ಭವನದಲ್ಲಿ 10.30ಕ್ಕೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ಜ. 21ರಂದು ಜಿಲ್ಲಾ ಮಟ್ಟದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಜರುಗಲಿದೆ’ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎ.ಬಸವರಾಜ, ಭೋವಿ ಸಮುದಾಯದ ಮುಖಂಡರಾದ ಸಂಕಪ್ಪ ಮಾಲಗಿತ್ತಿ, ಮಾಸ್ತೆಪ್ಪ ಕಟ್ಟಿಮನಿ, ರಾಮಣ್ಣ ಪೂಜಾರ, ಹುಚ್ಚಪ್ಪ ಭೋವಿ, ಬಸವರಾಜ ಇರಕಲ್ಲಗಡ, ಲಕ್ಷ್ಮಣ ಪೂಜಾರ, ಗಂಗಾಮತ ಸಮುದಾಯದ ಮುಖಂಡರಾದ ಯಮನಪ್ಪ ಕಬ್ಬೇರ, ಸೋಮಣ್ಣ ಬಾರಕೇರ, ಹುಲಗಪ್ಪ, ರಾಜು ಕಲೆಗಾರ, ಗಂಗಾಧರ ಕಬ್ಬೇರ, ಎನ್.ಯಂಕಪ್ಪ, ಉದಯಕುಮಾರ ಕಬ್ಬೇರ, ಹನಮಂತಪ್ಪ ಬಾರಕೇರ, ಶಿವಪ್ಪ ಕಬ್ಬೇರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.