ಕೊಪ್ಪಳ: ‘ತೆರಿಗೆ ಪಾಲು ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ನಿರಂತರ ಅನ್ಯಾಯದ ನಡುವೆಯೂ ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಈ ಕುರಿತು ಬಹಿರಂಗ ಚರ್ಚೆಗೆ ಬಿಜೆಪಿ ಸಿದ್ಧವಿದೆಯೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ಪ್ರಶ್ನಿಸಿದರು.

‘ಗ್ಯಾರಂಟಿ ಯೋಜನೆಗಳಿಗೆ ಕಳೆದ ಎರಡು ವರ್ಷಗಳಲ್ಲಿ ₹1 ಲಕ್ಷ ಕೋಟಿ ಖರ್ಚು ಮಾಡಿಯೂ ಪ್ರತಿ ಜಿಲ್ಲೆಗಳಿಗೂ ಅಭಿವೃದ್ಧಿಗೆ ಅನುದಾನ ನೀಡಲಾ ಗುತ್ತಿದೆ’ ಎಂದು ಪ್ರತಿಪಾದಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಒಟ್ಟು ₹2,000 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸರ್ಕಾರಿ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸರ್ಕಾರದಲ್ಲಿ ಹಣವಿಲ್ಲ, ಖಜಾನೆ ಖಾಲಿಯಾಗಿದೆ ಎನ್ನುವ ಬಿಜೆಪಿಯವರು ತಮ್ಮ ಅವಧಿಯಲ್ಲಿ ಹಣವಿಲ್ಲದಿದ್ದರೂ ಹೊಸ ಯೋಜನೆಗಳಿಗೆ ಚಾಲನೆ ನೀಡಿ ನಮ್ಮನ್ನು ಸಂಕಷ್ಟಕ್ಕೆ ದೂಡಿದ್ದರು. ನಾವೀಗ ಆರ್ಥಿಕವಾಗಿ ಸದೃಢವಾಗಿದ್ದೇವೆ. ತಲಾ ಆದಾಯದಲ್ಲಿ ರಾಜ್ಯ ಈಗ ದೇಶದಲ್ಲಿಯೇ ಅಗ್ರಸ್ಥಾನದಲ್ಲಿರುವುದು ಇದಕ್ಕೆ ಸಾಕ್ಷಿ’ ಎಂದು ನುಡಿದರು.

ರಾಜ್ಯ ಸರ್ಕಾರದಲ್ಲಿ ಹಣವಿಲ್ಲದಿದ್ದರೆ ಕೊಪ್ಪಳ ಜಿಲ್ಲೆಯಲ್ಲಿ ₹2000 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.

‘ಈವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹13 ಸಾವಿರ ಕೋಟಿ ನೀಡಿದ್ದೇನೆ. ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ರೈತರಿಗೆ ₹80 ಸಾವಿರ ಕೋಟಿ ಪರಿಹಾರ ಒದಗಿಸಿದ್ದೇನೆ. ಬಿಜೆಪಿಯವರು ನಿತ್ಯ ಹೇಳುವ ಸುಳ್ಳುಗಳಿಗೆ ರಾಜ್ಯದ ಜನ ತಮ್ಮ ಬುದ್ಧಿ ಒತ್ತೆ ಇಡಬಾರದು’ ಎಂದು ಮನವಿ ಮಾಡಿದರು.

ಗ್ಯಾರಂಟಿ ಯೋಜನೆಗಳಿಂದ ಜನರಲ್ಲಿ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯ ಆರ್ಥಿಕ ಪ್ರಗತಿ ಕಂಡಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.