ಗುರುವಾರ , ಮಾರ್ಚ್ 30, 2023
32 °C

ಸಿದ್ದರಾಮಯ್ಯ ಅವರ ಹೇಳಿಕೆ ಬಾಲಿಶತನದ್ದು: ಸಚಿವ ಹಾಲಪ್ಪ ಆಚಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: 'ಮುತ್ಸದ್ಧಿ ರಾಜಕಾರಣಿ ಎನಿಸಿಕೊಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಹೊಟ್ಟೆಪಾಡಿಗೆ ದಲಿತರು ಬಿಜೆಪಿ ಸೇರುತ್ತಾರೆ‘ ಎಂಬ ಹೇಳಿಕೆ ಬಾಲಿಶತನದ್ದು ಮತ್ತು ಖಂಡನೀಯವಾಗಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್‌ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಹಾನಗಲ್ಲ ಮತ್ತು ಸಿಂದಗಿ ಉಪ ಚುನಾವಣೆ ಸಂದರ್ಭದಲ್ಲಿ ಕೆಲವರನ್ನು ತೃಪ್ತಿಪಡಿಸಲು ದಲಿತರ ವಿರುದ್ಧ ಮಾತನಾಡಿರುವುದು ಅವರ ಘನತೆಗೆ ಶೋಭೆ ತರುವುದಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ಸಮರ್ಥನೀಯ' ಎಂದರು.

'ಕಾಂಗ್ರೆಸ್‌ನವರು ಬಿಜೆಪಿ ವಿರುದ್ಧ ಆರೋಪ ಮಾಡಲು ಯಾವುದೇ ದಾಖಲೆಗಳಿಲ್ಲ. ಶೋಷಿತರ ಪರ ಎಂದು ಹೇಳುತ್ತಲೇ 50 ವರ್ಷ ದಲಿತರನ್ನು ಶೋಷಣೆ ಮಾಡಿದ್ದಾರೆ. ಅವರಿಗೆ ಬುದ್ಧಿ ಇದ್ದರೆ ಹೀಗಾಗುತ್ತಿರಲಿಲ್ಲ. ಇದಕ್ಕೆ ಜನತೆಯೇ ತಕ್ಕ ಉತ್ತರ ನೀಡಲಿದ್ದಾರೆ' ಎಂದರು.

‘ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ 24 ಸ್ಥಾನಗಳಲ್ಲಿ ನಮ್ಮ ಪಕ್ಷ ಜಯಗಳಿಸಿದೆ. ಕೊಪ್ಪಳ, ರಾಯಚೂರು ಕ್ಷೇತ್ರದ ಉಸ್ತುವಾರಿಯನ್ನು ನಮಗೆ ವಹಿಸಿದ್ದು, ಎಂಟು ಜನ ಆಕಾಂಕ್ಷಿಗಳಿದ್ದಾರೆ. ಇನ್ನೊಂದೆರಡು ದಿನದಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು‘ ಎಂದರು.

‘ಹೊಸ ಮರಳು ನೀತಿ ಕುರಿತು ಸರ್ಕಾರ ನಿರ್ಣಯ ಕೈಗೊಂಡಿದೆ. ಇದರಿಂದ ಬಹುತೇಕ ಸಮಸ್ಯೆ ಬಗೆಹರಿಯಲಿದೆ. ಸ್ಥಳೀಯ ಪಂಚಾಯಿತಿಗಳಿಗೆ ಮರಳು ಮಾರಾಟಕ್ಕೆ ಹೆಚ್ಚಿನ ಅವಕಾಶ ಸಿಗಲಿದೆ. ದೊಡ್ಡ ಪ್ರಮಾಣದ ಮರಳನ್ನು ಖರೀದಿಗೆ ನೀತಿ ರೂಪಿಸಲಾಗಿದೆ. ಇದರಿಂದ ರಾಜಧನ ಕೂಡಾ ಹೆಚ್ಚಾಗಲಿದೆ. ಇದರ ಪರಿಣಾಮ ಮುಂಬರುವ ದಿನಗಳಲ್ಲಿ ಎಲ್ಲರಿಗೂ ಅರ್ಥವಾಗುತ್ತದೆ‘ ಎಂದರು.

ಶಾಸಕ ಬಸವರಾಜ ದಡೇಸಗೂರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು