ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಬಿಜೆಪಿಗೆ ಸಿದ್ದೇಶ ಪೂಜಾರ ರಾಜೀನಾಮೆ

Published 10 ಏಪ್ರಿಲ್ 2024, 15:22 IST
Last Updated 10 ಏಪ್ರಿಲ್ 2024, 15:22 IST
ಅಕ್ಷರ ಗಾತ್ರ

ಕೊಪ್ಪಳ: ಬಿಜೆಪಿ ಎಸ್‌.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಸಿದ್ದೇಶ ಪೂಜಾರ ಪಕ್ಷವನ್ನು ತೊರೆದಿದ್ದು ಶಾಸಕ ರಾಘವೇಂದ್ರ ಹಿಟ್ನಾಳ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಎಸ್‌.ಸಿ. ಮೋರ್ಚಾ ಜಿಲ್ಲಾಧ್ಯಕ್ಷನಾದ ದಿನದಿಂದಲೂ ಪಕ್ಷ ಸಂಘಟನೆಗೆ ಸರಿಯಾಗಿ ಸಹಕಾರ ಸಿಗುತ್ತಿಲ್ಲ. ಈ ಕಾರಣದಿಂದಾಗಿ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸ್ಥಾನ ಮತ್ತು ಪ್ರಾಥಮಿಕ ಸದಸ್ಯತ್ವ ಎರಡಕ್ಕೂ ರಾಜೀನಾಮೆ ನೀಡಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ವಿವಾಹಕ್ಕೆ ಹೆಸರು ನೋಂದಾಯಿಸಲು ಮನವಿ

ಕೊಪ್ಪಳ: ತಾಲ್ಲೂಕಿನ ವದಗನಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಏ.22ರಿಂದ 24ರ ತನಕ ಹಮ್ಮಿಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ಜರುಗಲಿವೆ. ಆಸಕ್ತರು ಏಪ್ರಿಲ್‌ 18ರಒಳಗಾಗಿ ಹೆಸರು ನೋಂದಾಯಿಸಲು ಸಂಘಟಕರು ಮನವಿ ಮಾಡಿದ್ದಾರೆ.   

ಕಾನೂನಿನ ನಿಯಮದ ಪ್ರಕಾರ ವಧುವಿಗೆ 18 ಹಾಗೂ ವರನಿಗೆ 21 ವರ್ಷ ಕಡ್ಡಾಯವಾಗಿ ತುಂಬಿರಬೇಕು. ಆಸಕ್ತ ವಧುವರರು ಶಾಲಾ ದೃಢಿಕರಣ ಪತ್ರ, ಆಧಾರ ಕಾರ್ಡ್‌, ನಾಲ್ಕು ಭಾವಚಿತ್ರ, ವಾಸಸ್ಥಳ ಪ್ರಮಾಣ ಪತ್ರದ ದಾಖಲೆಗಳನ್ನು ತರಬೇಕು. ಇನ್ನಷ್ಟು ಮಾಹಿತಿಗಾಗಿ
ಬಸಣ್ಣ ಹೆಗ್ಗನಗೌಡ್ರು 9611772599, ಬಿ.ಎಸ್ ಜಗನ್ನಾಥ 9483371080 ಅವರನ್ನು ಸಂಪರ್ಕಿಸಿಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT