ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಳವಾಗಿ ಗವಿಸಿದ್ಧೇಶ್ವರ ಮಹಾರಥೋತ್ಸವ ಆಚರಣೆ

Last Updated 30 ಜನವರಿ 2021, 5:55 IST
ಅಕ್ಷರ ಗಾತ್ರ

ಕೊಪ್ಪಳ: ಕೋವಿಡ್ ಹಿನ್ನೆಲೆಯಲ್ಲಿ ಶನಿವಾರ ಗವಿಮಠದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಮಹಾರಥೋತ್ಸವಸರಳವಾಗಿ ನಡೆಯಿತು.

ವಿವಿಧ ಧಾರ್ಮಿಕ ಕಾರ್ಯಗಳ ಮಧ್ಯೆ ಬಿಜಕಲ್ ನ ಚೆನ್ನವೀರ ಸ್ವಾಮೀಜಿ ರಥೋತ್ಸವಕ್ಕೆ ನಿಶಾನೆ ತೋರಿಸಿ ಚಾಲನೆ ನೀಡಿದರು.

ಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಭಕ್ತರ ಜಯಘೋಷಗಳ ಮಧ್ಯೆ ರಥವನ್ನು ಪಾದಗಟ್ಟೆವರೆಗೆ ಎಳೆದರು.

ತೇರನೆಳೆಯಲು ಈ ಸಾರಿ ಭಕ್ತರಿಗೆ ಅವಕಾಶ ನೀಡಿರಲಿಲ್ಲ. ಮಠದ ಸ್ವಯಂ ಸೇವಕರು ರಥವನ್ನು ಎಳೆದರು.

ದೂರದಿಂದಲೇ ಕಣ್ತುಂಬಿಕೊಂಡ ಭಕ್ತರು ಉತ್ತತ್ತಿ, ಬಾಳೆ ಹಣ್ಣು, ಕಬ್ಬು, ಹೂಗಳನ್ನು ಎಸೆದು ಕೃತಾರ್ಥರಾದರು.

8.45 ಕ್ಕೆ ರಥೋತ್ಸವ ಆರಂಭವಾಯಿತು.‌ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ, ಶಾಸಕರಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ, ರಾಘವೇಂದ್ರ ಹಿಟ್ನಾಳ, ಬಸವರಾಜ ದಡೇಸಗೂರ, ಅಮರೇಶ ಕರಡಿ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT