ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಂಚಮಸಾಲಿ ಶ್ರೀಗಳಿಗೆ ಅವಹೇಳನ: ಕ್ರಮಕ್ಕೆ ಆಗ್ರಹ

Published 9 ಆಗಸ್ಟ್ 2024, 16:05 IST
Last Updated 9 ಆಗಸ್ಟ್ 2024, 16:05 IST
ಅಕ್ಷರ ಗಾತ್ರ

ಕಾರಟಗಿ: ಸಾಮಾಜಿಕ ಜಾಲತಾಣದ ವಾಟ್ಸ್‌ಆ್ಯಪ್‌ನಲ್ಲಿ ಕೂಡಲಸಂಗಮ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಗ್ಗೆ ಅವಹೇಳನಕಾರಿಯಾಗಿ ಬರೆದು, ಪೋಸ್ಟ್‌ ಮಾಡಿರುವ ದುಷ್ಕರ್ಮಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ತಾಲ್ಲೂಕು ಪಂಚಮಸಾಲಿ ಕ್ಷೇಮಾಭಿವೃದ್ದಿ ಸಂಘದವರು ಪೊಲೀಸ್ ಠಾಣೆಗೆ ಶುಕ್ರವಾರ ಮನವಿ ಸಲ್ಲಿಸಿದರು.

‘ಗುರುಪೀಠದ ದಾಸೋಹ ಸಮಿತಿ ರಾಜ್ಯಾಧ್ಯಕ್ಷ ಚನ್ನಬಸಪ್ಪ ಸುಂಕದ, ಅನ್ನದಾತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶರಣಪ್ಪ ಕೊತ್ವಾಲ್, ಜಿ.ಪಂ. ಮಾಜಿ ಅಧ್ಯಕ್ಷ ಅಮರೇಶ ಕುಳಗಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶರಣೇಗೌಡ ಮರೇಗೌಡ ಮಾಲಿಪಾಟೀಲ್ ಮಾತನಾಡಿ‌, ‘ಶ್ರೀಗಳ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿ, ಪ್ರಶ್ನಿಸಿದರೆ ತನ್ನನ್ನು ಸಮರ್ಥಿಸಿಕೊಳ್ಳುತ್ತಿರುವ ವ್ಯಕ್ತಿಯಿಂದ ಶ್ರೀಗಳ ಹಾಗೂ ಸಮಾಜದವರ ಭಾವನೆಗಳಿಗೆ ಧಕ್ಕೆಯಾಗಿದೆ. ಕಾರಣವಾದ ವ್ಯಕ್ತಿಯನ್ನು ಬಂಧಿಸಿ, ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಮಾಜ ಹೋರಾಟವನ್ನು ತೀಕ್ಷ್ಣಗೊಳಿಸಲಾಗುವುದು’ ಎಂದರು.

ಪಂಚಮಸಾಲಿ ಸಮಾಜದ ತಾಲ್ಲೂಕಾಧ್ಯಕ್ಷ ಪಾಲಾಕ್ಷಪ್ಪ ಕೆಂಡದ, ಗುಂಡಪ್ಪ ಕುಳಗಿ, ವಿರುಪಾಕ್ಷಪ್ಪ ಕಟಾಂಬ್ಲಿ, ಸಿದ್ದಾಪುರದ ನಾಗೇಶ ಸಿಂಧನೂರು, ವಿರುಪಾಕ್ಷಿ ತಿಮ್ಮಾಪುರ ಸೇರಿದಂತೆ ಅನೇಕರು ಹಾಜದ್ದರು. ‘ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT