ಸೋಮವಾರ, ನವೆಂಬರ್ 29, 2021
20 °C
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

ಅಸ್ಸಾಂ ಹಿಂಸಾಚಾರ ಖಂಡಿಸಿ ಸಾಲಿಡಾರಿಟಿ ಯೂತ್ ಮೂವ್‍ಮೆಂಟ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಅಸ್ಸಾಮಿನ ಅಮಾಯಕ ನಾಗರಿಕರ ಮೇಲೆ ಪೊಲೀಸ್ ದಾಳಿ ಖಂಡನೀಯ. ರಾಜ್ಯ ಸರ್ಕಾರ ಬಲವಂತವಾಗಿ ನಾಗರಿಕರನ್ನು ತೆರವುಗೊಳಿಸುವ ಪ್ರಕ್ರಿಯೆಗೆ ಮುಂದಾದ ಪರಿಣಾಮ ಇಬ್ಬರು ಅಮಾಯಕ ನಾಗರಿಕರು ಹತ್ಯೆಗೀಡಾಗಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದ್ದು ತಪ್ಪಿತಸ್ಥರ ವಿರುದ್ಧ ಶೀಘ್ರ ತನಿಖೆ ನಡೆಯಬೇಕು ಸಾಲಿಡಾರಿಟಿ ಯೂತ್ ಮೂವ್‍ಮೆಂಟ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಜನಾಂಗೀಯ ಮತ್ತು ಕೋಮು ವಿಭಜನೆಯ ಲಾಭವನ್ನು ಪಡೆಯಲು ಯತ್ನಿಸುತ್ತಿರುವ ಅಸ್ಸಾಮ್ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ರಾಜೀನಾಮೆ ನೀಡಬೇಕು. ಪೊಲೀಸರು ಯಾವುದೇ ಎಚ್ಚರಿಕೆ ನೀಡದೆ, ಮಕ್ಕಳು ಮತ್ತು ಮಹಿಳೆಯರು ಸೇರಿ ಸಾವಿರಾರು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಲಾಠಿ ಮತ್ತು ಬಂದೂಕು ಹೊಂದಿದ್ದ ಪೊಲೀಸರು, ಪ್ರತಿಭಟನಾಕಾರರನ್ನು ಅಟ್ಟಾಡಿಸಿಕೊಂಡು ಹೊಡೆದು, ಗುಂಡು ಹಾರಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿವೆ ಇದು ಅತ್ಯಂತ ಅಮಾನವೀಯ ಕೃತ್ಯವಾಗಿದೆ ಎಂದು ಖಂಡಿಸಿದೆ.

ಕಳೆದ ಕೆಲವು ದಿನಗಳ ಹಿಂದೆ ಅಸ್ಸಾಂ ಸರ್ಕಾರ ಅಕ್ರಮ ಒತ್ತುವರಿ ಎಂದು ಆರೋಪಿಸಿ, ಯಾವುದೇ ಪುನರ್ವಸತಿ ಯೋಜನೆಯನ್ನು ಕಲ್ಪಿಸದೆ ಸುಮಾರು 900ಕ್ಕೂ ಅಧಿಕ ಕುಟುಂಬಗಳನ್ನು ತೆರವುಗೊಳಿಸಿದ್ದು, ಕನಿಷ್ಠ 20 ಸಾವಿರ ಜನರು ನಿರ್ವಸಿತರಾಗಿದ್ದಾರೆ. ದರಾಂಗ್ ಜಿಲ್ಲೆಯ ಗೋರುಖುಟಿ, ಸಿಪಾಜಪುರ ಪ್ರದೇಶಗಳಲ್ಲಿ ಒಕ್ಕಲೆಬ್ಬಿಸಿದ ಸುಮಾರು 77 ಸಾವಿರ ಬಿಘಾ ಭೂಮಿಯನ್ನು ಕೃಷಿಗಾಗಿ ಬಳಸಿಕೊಳ್ಳಲಾಗುವುದು ಎಂದು ಸರ್ಕಾರ ಹೇಳುತ್ತಿದೆ.

ಉತ್ತರ ಪ್ರದೇಶದ ಲಖಿಂಪುರ ಕೇರಿಯಲ್ಲಿ ಶಾಂತಿಯುತ ಅಮಾಯಕ ರೈತರ ಹತ್ಯೆ ಖಂಡಿಸಲಾಯಿತು. ಯೂತ್ ಮೂವ್‍ಮೆಂಟ್ ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಗೌಸ್ ಪಾಷಾ ಪಟೇಲ್, ಉಪಾಧ್ಯಕ್ಷ ಎಜಾಜ್ ಅಹ್ಮದ್ ಶೇಖ್, ಕಾರ್ಯದರ್ಶಿ ಜಕ್ರೀಯಾ ಖಾನ್, ವೆಲ್ಫೇರ್ ಪಾರ್ಟಿ ಅಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ಸೈಯ್ಯದ್ ಆದಿಲ್ ಪಟೇಲ್, ಎಸ್.ಐ.ಓ ಸಂಘಟನೆ ಜಿಲ್ಲಾ ಅಧ್ಯಕ್ಷ ಇಲಿಯಾಸ್ ನಾಲಬಂದ್, ಮುಹ್ಮದ್ ಅಫ್ರೋಜ್, ಮುಹ್ಮದ್ ಇಸ್ಹಾಕ್ ಫುಜೇಲ್ ಮತ್ತು ಅಸಗರ್ ಖಾನ್, ಸಲೀಂ ಮಂಡಲಗೇರಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು