ರಾಜೀವ್‌ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮದ ಫೆಲೋ ತಿಪ್ಪೇಸ್ವಾಮಿ ಎಂ ಮಾತನಾಡಿ, ಬಸ್ ನಿಲ್ದಾಣ, ಉದ್ಯಾನ, ಸಾರ್ವಜನಿಕ ಸ್ಥಳ ಹಾಗೂ ಕಚೇರಿಗಳಲ್ಲಿ ಬಿಡುವಿನ ಸಮಯದಲ್ಲಿ ಪುಸ್ತಕ ಓದುವ ಹವ್ಯಾಸ ಮೂಡಲಿ ಎಂಬ ಉದ್ದೇಶದಿಂದ ಈ ಪುಸ್ತಕ ಗೂಡುಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಕಥೆ, ಕಾದಂಬರಿ, ನಿಯತಕಾಲಿಕೆಗಳು ಲಭ್ಯವಿದ್ದು, ಪುಸ್ತಕಗಳನ್ನು ಓದುವ ಇಲ್ಲವೇ ಮನೆಗೆ ತೆಗೆದುಕೊಂಡು ಓದಿ ಮರಳಿ ಗೂಡಿಗೆ ತಂದಿಡಲು ಅವಕಾಶವಿದೆ. ಇದು ಜನರಿಗೆ ಓದುವ ಹವ್ಯಾಸ ಮೂಡಿಸುವ ಉತ್ತಮ ಪರಿಕಲ್ಪನೆಯಾಗಿದೆ. ಓದುಗರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.