ಮಂಗಳವಾರ, ಮಾರ್ಚ್ 28, 2023
22 °C

‘ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಅವಶ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ‘ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆಗಳು ಅವಶ್ಯಕ‘ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್ ತಿಳಿಸಿದರು.

ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕನ್ನಡ ರಾಜ್ಯೋತ್ಸವದ ನಿಮಿತ್ತ ಶನಿವಾರ ನಡೆದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆಗಳು ಇಲ್ಲದಿದ್ದರೆ ಮನುಷ್ಯ ಕ್ರಿಯಶೀಲನಾಗರಿರಲು ಸಾಧ್ಯವಿಲ್ಲ. ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಅವಶ್ಯಕವಾಗಿವೆ. ಯುವಕರು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯ ಕಾಪಾಡಿಕೊಳ್ಳುವ ಕ್ರೀಡೆಗಳಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

ಕೆಡಿಪಿ ಸದಸ್ಯ ಹನುಮೇಶ ಯಲಬುರ್ಗಿ, ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಣ್ಣ ಕನಕಪ್ಪ, ಯುವ ಮೋರ್ಚಾ ಉಪಾಧ್ಯಕ್ಷ ಮೌನೇಶ ದಢೇಸೂಗುರು, ಪ್ರಮುಖರಾದ ಪಾಮಣ್ಣ ಅರಳಿಗನೂರ, ಸುಭಾಸ ಕಂದಕೂರು, ಯಮನೂರಪ್ಪ ಆರೇರ್ ರಮೇಶ ಚೆಲುವಾದಿ, ತಿಮ್ಮಣ್ಣ ಬಡಿಗೇರ, ಕಂಠಿ ಮ್ಯಾಗಡೆ, ರಂಗಪ್ಪ ಕೊರಗಟಗಿ, ಹರೀಶ ಪೂಜಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.