ಕೊಪ್ಪಳ: ರಾಘವೇಂದ್ರ ಸ್ವಾಮಿ ಮಠದಲ್ಲಿ ಶುಕ್ರವಾರ ಶ್ರೀನಿವಾಸ ಕಲ್ಯಾಣ ಮಹೋತ್ಸವ ನಡೆಯಲಿದ್ದು, ಮುನ್ನಾದಿನವಾದ ಗುರುವಾರ ಅದ್ದೂರಿಯಾಗಿ ಮೆರವಣಿಗೆ ನಡೆಯಿತು.
ಇಲ್ಲಿನ ಸತ್ಯಧ್ಯಾನಪುರ ಬಡಾವಣೆಯ ಆಂಜನೇಯ ದೇವಸ್ಥಾನದಿಂದ ರಾಯರ ಮಠದ ತನಕ ಶ್ರೀನಿವಾಸ ದೇವರ ಮೆರವಣಿಗೆಯಲ್ಲಿ ವಿವಿಧ ಭಜನಾ ತಂಡಗಳು ಪಾಲ್ಗೊಂಡಿದ್ದವು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜನ ಮೆರವಣಿಗೆ ಜೊತೆಗೆ ಹೆಜ್ಜೆ ಹಾಕಿದರು. ರಾಯರ ಮಠದಲ್ಲಿ ಸಂಜೆ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕಲ್ಯಾಣ ಮಹೋತ್ಸವ ಅಂಗವಾಗಿ ಮಠದ ಆವರಣವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಾಯರ ವೃಂದಾವನಕ್ಕೆ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.