ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ಸಾಹದಿಂದ ಹಾಜರಾದ ವಿದ್ಯಾರ್ಥಿಗಳು

Last Updated 20 ಜುಲೈ 2021, 4:01 IST
ಅಕ್ಷರ ಗಾತ್ರ

ಕಾರಟಗಿ: ಸೋಮವಾರ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ತಾಲ್ಲೂಕಿನ 7 ಕೇಂದ್ರಗಳಲ್ಲಿ ಸುಗಮವಾಗಿ ನಡೆಯಿತು.

ಮೊದಲ ದಿನ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಿತು. ಕೋವಿಡ್ ಮಾರ್ಗಸೂಚಿ ಪಾಲಿಸಲಾಯಿತು.

ಪಟ್ಟಣದ 3 ಕೇಂದ್ರಗಳಲ್ಲಿ ಒಟ್ಟು 874 ವಿದ್ಯಾರ್ಥಿಗಳು ಹಾಜರಾದರು. ಐವರು ಗೈರಾಗಿದ್ದರು. ಸಿದ್ದಾಪುರದಲ್ಲಿ 13, ಬೂದುಗುಂಪಾ, ಮತ್ತು ಮರ್ಲಾನಹಳ್ಳಿ ಕೇಂದ್ರದಲ್ಲಿ ತಲಾ ಒಬ್ಬ ವಿದ್ಯಾರ್ಥಿ ಗೈರು ಹಾಜರಾಗಿದ್ದರು.

ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರ ಸೇರಿದಂತೆ ಇತರ ಕೇಂದ್ರಗಳಲ್ಲಿ ಆರೋಗ್ಯ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದು, ಪರೀಕ್ಷಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದರು.

171 ಸಿಬ್ಬಂದಿಯನ್ನು ಪರೀcಕ್ಷಾ ಕಾರ್ಯಕ್ಕೆ ಬಳಸಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT