ಸೋಮವಾರ, ಆಗಸ್ಟ್ 8, 2022
24 °C

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ‘ಕೋವಿಡ್ ಕಾರಣ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು’ ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ ಹೇಳಿದರು.

ತಾಲ್ಲೂಕಿನ ತಿಪ್ಪನಾಳ ಗ್ರಾಮದ ಶ್ರೀಮತಿ ಪಾರ್ವತೆಮ್ಮ.ಬಿ. ಮಹಿಳಾ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಶನಿವಾರ ಇಲ್ಲಿನ ಕೆಪಿಎಸ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ನೇರ ಫೋನ್ ಇನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾರ್ಥಿಗಳು ಸಿದ್ಧತೆ ನಡೆಸಬೇಕು. ಆತಂಕವಿಲ್ಲದೆ ಪರೀಕ್ಷೆ ಬರೆದು ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನಗೌಡ ಮಾತನಾಡಿ ಶೈಕ್ಷಣಿಕ ಪ್ರಗತಿಗಾಗಿ ಸಂಸ್ಥೆ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತು ತಿಳಿಸಿದರು.

ಆದರ್ಶ ವಿದ್ಯಾಲಯದ ಮುಖ್ಯಶಿಕ್ಷಕ ಶಿವಕುಮಾರ ಮಾತನಾಡಿ,‘ವಿದ್ಯಾರ್ಥಿಗಳು ಹೊಸ ಪರೀಕ್ಷಾ ಪದ್ಧತಿಗೆ ಅನುಗುಣವಾಗಿ ಸಿದ್ಧತೆ ನಡೆಸಲು ಈ ಕಾರ್ಯಕ್ರಮ ಪೂರಕ’ ಎಂದು ಅವರು
ಹೇಳಿದರು.

ಸಂಪನ್ಮೂಲ ವ್ಯಕ್ತಿ ಹಾಗೂ ಮುನಿರಾಬಾದ್ ಡಯಟ್ ಕಾಲೇಜಿನ ಉಪನ್ಯಾಸಕ ಕಲೀಮ್ ಶೇಕ್ ಅವರು ವಿದ್ಯಾರ್ಥಿಗಳಿಗೆ ಒಎಂಆರ್ ಶೀಟ್ ಭರ್ತಿ ಮಾಡುವ ವಿಧಾನ, ಪ್ರಶ್ನೆ ಪತ್ರಿಕೆಯ ನೀಲನಕ್ಷೆ, ಪರೀಕ್ಷೆ ಭಯ ನಿವಾರಣೆ ಕುರಿತು ತಿಳಿಸಿದರು.

ಪ್ರಾಂಶುಪಾಲ ಗುರುಪಾದಗೌಡ, ಹುಲಿಹೈದರದ ಸಂಪನ್ಮೂಲ ವ್ಯಕ್ತಿ ಮುರ್ತುಜಾ ಖಾದ್ರಿ ಹಾಗೂ ಮುಖ್ಯಶಿಕ್ಷಕ ಶೇಖರಪ್ಪ ಇದ್ದರು.

138 ವಿದ್ಯಾರ್ಥಿಗಳು ನೇರ್ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು