ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ 25,104 ವಿದ್ಯಾರ್ಥಿಗಳು

Last Updated 31 ಮಾರ್ಚ್ 2023, 7:22 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯಾದ್ಯಂತ 79 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಆರಂಭವಾದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು 25,104 ವಿದ್ಯಾರ್ಥಿಗಳು ಬರೆಯಲಿದ್ದಾರೆ.

ಈ ಕೇಂದ್ರಗಳಲ್ಲಿ ಎರಡ್ಮೂರು ದಿನಗಳಿಂದ ನೋಂದಣಿ ಸಂಖ್ಯೆ ಹಾಕುವುದು, ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾಡಿದರು. ಏ. 15ರ ವರೆಗೆ ಪರೀಕ್ಷೆ ನಡೆಯಲಿವೆ. 12,802 ಗಂಡು ಮತ್ತು 12,302 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದು, ಮೂರು ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್, ಕ್ಯಾಲುಕಲೇಟರ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೈಗೊಳ್ಳಬೇಕು ಎಂದು ಇಲಾಖೆ ಈಗಾಗಲೇ ಇಲಾಖೆಯ ಸಿಬ್ಬಂದಿಗೆ ಸೂಚಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ.ಎ ರೆಡ್ಡೇರ್ ಈ ಕುರಿತು ಮಾಹಿತಿ ನೀಡಿ ‘ಪರೀಕ್ಷೆ ಸುಗಮವಾಗಿ ನಡೆಸಲು ಆಯಾ ಮಾರ್ಗವಾರು ವಾಹನಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸಿಟ್ಟಿಂಗ್‌ ಸ್ಕ್ವಾಡ್‌ ನೇಮಕ ಮಾಡಲಾಗಿದೆ. ಅಂದಾಜು 100 ಅಂಗವಿಕಲ ವಿದ್ಯಾರ್ಥಿಗಳು ಇದ್ದು, ಅವರು ಸುಲಭವಾಗಿ ಪರೀಕ್ಷಾ ಕೇಂದ್ರದ ಕೊಠಡಿಗೆ ಹೋಗಲು ಅನುಕೂಲ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

’ಆತ್ಮವಿಶ್ವಾಸದಿಂದ ಮತ್ತು ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಹಲವು ವಿದ್ಯಾರ್ಥಿಗಳನ್ನು ಭೇಟಿಯಾಗಿ ಶುಭಾಶಯ ಕೋರಿದ್ದೇನೆ. ಶಿಕ್ಷಕರು ಅವರಲ್ಲಿನ ಆತಂಕ ದೂರ ಮಾಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT