ಕೊಪ್ಪಳ: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಆರಂಭವಾಗಲು ಒಂದು ದಿನ ಬಾಕಿ ಇರುವಾಗಲೇ ನಕಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿರುವ ಘಟನೆ ನಡೆದಿದ್ದು, ಈ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ಡಿಡಿಪಿಐ ಶ್ರೀಶೈಲ ಬಿರಾದಾರ ನಗರ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಾಗಿದೆ.

‘ಇನ್ಸ್ಟಾ ಗ್ರಾಂ ಖಾತೆಯಲ್ಲಿ ಎಸ್.ಕೆ.ಕ್ರಿಯೇಷನ್ಸ್ ಹೆಸರಿನಲ್ಲಿ ಪ್ರಶ್ನೆಪತ್ರಿಕೆ ಪೋಸ್ಟ್ ಮಾಡಿದ್ದು ಗಮನಕ್ಕೆ ಬಂದಿದೆ. ಆ ಪೋಸ್ಟ್ ಗಮನಿಸಿದರೆ ಮೇಲ್ನೋಟಕ್ಕೆ ನಕಲಿ ಎಂದು ಕಂಡುಬಂದಿದೆ. ಆದರೆ, ಪರೀಕ್ಷೆ ಸಮೀಪವಿರುವ ದಿನಗಳಲ್ಲಿಯೇ ಸುಳ್ಳು ಸುದ್ದಿ ಹರಡಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೋಸ್ಟ್ ಮಾಡಿದ್ದು ಯಾರು ಎನ್ನುವುದನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.