ಕನಕಗಿರಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು,ಪಟ್ಟಣದ ಆದರ್ಶ ವಿದ್ಯಾಲಯದ ಶೇ. 100 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪರೀಕ್ಷೆ ಬರೆದ 60 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಹಾಗೂ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸಮೀಪದ ಸುಳೇಕಲ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕಿ ನೌನೀನ್ ಆಫ್ಸನ್ ಬಿ.ಎಚ್. ಕಲೀಲ್ ಉಲ್ಲಾ ಅವರ ಪುತ್ರಿ ಆಸ್ರಾಮಹೀನ್ ಅವರು 625 ಅಂಕಗಳಿಗೆ 623 ಅಂಕ ಪಡೆದು ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯಾಗಿ ಹೊರ ಹೊಮ್ಮಿದ್ದಾರೆ.

ಆಸ್ರಾಮಹೀನ ಅವರು ಕನ್ನಡ-100, ಇಂಗ್ಲಿಷ್-125, ಹಿಂದಿ-100, ಸಮಾಜ ವಿಜ್ಞಾನ-100, ವಿಜ್ಞಾನ-98 ಹಾಗೂ ಗಣಿತದಲ್ಲಿ 100 ಅಂಕ ಪಡೆದಿದ್ದಾರೆ.

ಬಸವರೆಡ್ಡಿ (ಶೇ.93.92) ಹಾಗೂ ಹನುಮೇಶ ಪೂಜಾರ (ಶೇ.91 52) ಅಂಕ ಪಡೆದು ಶಾಲೆಗೆ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಮುಖ್ಯಶಿಕ್ಷಕ ಶಿವಕುಮಾರ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಕನಕರೆಡ್ಡಿ ಕೆರಿ ತಿಳಿಸಿದ್ದಾರೆ.

ಆಸ್ರಾಮಹೀನ್ ಅವರ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಪಾಟೀಲ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ವಿವಿ ಗೊಂಡಬಾಳ ಸಂತಸ ವ್ಯಕ್ತ ಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.