ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ಯಲಬುರ್ಗಾ- ರೋಹಿತ್‌ಗೆ ಅಗ್ರಸ್ಥಾನ

4754 ವಿದ್ಯಾರ್ಥಿಗಳು ಉತ್ತೀರ್ಣ
Last Updated 11 ಆಗಸ್ಟ್ 2021, 2:29 IST
ಅಕ್ಷರ ಗಾತ್ರ

ಯಲಬುರ್ಗಾ: ಪ್ರಸ್ತುತ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಯಲಬುರ್ಗಾ ತಾಲ್ಲೂಕಿನಲ್ಲಿ ಶೇ100ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾಗಿದ್ದ 4754 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಪೈಕಿ ಬೇವೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ರೋಹಿತ್ 619 ಅಂಕಗಳನ್ನು ಪಡೆದು ತಾಲ್ಲೂಕಿಗೆ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ಉಳಿದಂತೆ ಬಳೂಟಗಿಯ ಸರ್ಕಾರಿ ಪ್ರೌಢ ಶಾಲೆಯ ಅಶ್ವಿನಿ ಗಾಣಿಗೇರ 617, ತೊಂಡಿಹಾಳ ಗ್ರಾಮ ಸರ್ಕಾರಿ ಪ್ರೌಢ ಶಾಲೆಯ ಪಲ್ಲವಿ ಮದ್ದಾನಯ್ಯ 615 ಅಂಕಗಳನ್ನು ಗಳಿಸಿ ಉತ್ತಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ತಿಳಿಸಿದ್ದಾರೆ.

ಉತ್ತಮ ಸಾಧನೆ: ಸ್ಥಳೀಯ ಸಿದ್ಧರಾಮೇಶ್ವರ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಹಾಜರಾಗಿದ್ದ 50 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಮಾಳಮ್ಮ ಮಾಡಲಗೇರಿ, ರಾಜೇಶ್ವರಿ ಎಮ್ಮಿ, ಪೂರ್ಣಿಮಾ ಗಾಣಿಗೇರ, ಪುಟ್ಟರಾಜ ಶಂಕ್ರಿ, ಅರ್ಚನಾ ಜೋಗಿನ ಇವರು ಶೇ 91ಕ್ಕು ಅಧಿಕ ಅಂಕಗಳನ್ನು ಪಡೆದವರಾಗಿದ್ದಾರೆ ಎಂದು ಮುಖ್ಯ ಶಿಕ್ಷಕ ಎಸ್.ಡಿ. ಅಪ್ಪಾಜಿ ತಿಳಿಸಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಸಂಸ್ಥಾನ ಹಿರೇಮಠದ ಪೀಠಾಧಿಕಾರಿ ಸಿದ್ಧರಾಮೇಶ್ವರ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT